ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು.
ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ ಹಾಗೂ ತಂಡದ ಸ್ಪರ್ಧೆಗಳಲ್ಲಿ ಭಾಗವಹಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯ ಸಿಬ್ಬಂದಿಯಾಗಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಹಾಗೂ ಪ್ರಸ್ತುತ ಭಾರತೀಯ ಮಹಿಳಾ ಬಾಸ್ಕೆಟ್‌ಬಾಲ್ ತಂಡದ ನಾಯಕಿಯಾದ ಎಂ.ಎಸ್.ಭಾಂದವ್ಯ ರವರನ್ನು ಸನ್ಮಾನಿಸಲಾಯಿತು.
ಶ್ರೀಮತಿ ಅಗರ್ವಾಲ್ ರವರು ವಿಜೇತರನ್ನು ಅಭಿನಂದಿಸುತ್ತಾ, ಪದಕ ಗೆದ್ದಿದ್ದರೂ, ಗೆಲ್ಲದಿದ್ದರೂ, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ವಿಜೇತರು ಎಂದು ನಾನು ದೃಢವಾಗಿ ನಂಬಿದ್ದೇನೆ ಎಂದು ಹೇಳಿದರು. ಅಂತ್ಯದಲ್ಲಿ ಕ್ರೀಡೆಯು ಫಿಟ್ನೆಸ್, ಆರೋಗ್ಯ ಮತ್ತು ಸಂತೋಷದ ವಿಷಯದಲ್ಲಿ ದೊಡ್ಡ ವ್ಯತ್ಯಾಸ ತರುತ್ತದೆ. ಭಾಗವಹಿಸುವವರ ನಡುವೆ ಸಾಮಾಜಿಕ ಸಂಬಂಧಗಳನ್ನು ಬೆಳೆಸಲು ಕ್ರೀಡೆಗಳು ಸಹಾಯ ಮಾಡಿ ಸಮಾಜದಲ್ಲಿನ ಅವರ ಪಾತ್ರದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಅಂತಿಮವಾಗಿ, ಸುತ್ತಮುತ್ತಲೂ ಹರ್ಷವನ್ನು ತರಲು ಮತ್ತು ಸಮುದಾಯಕ್ಕೆ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಲು ಇದು ವ್ಯಕ್ತಿಯನ್ನು ರೂಪಿಸುತ್ತದೆ ಎಂದು ಅವರು ತಿಳಿಸಿದರು.
ಶ್ರೀಮತಿ ಭಾಂದವ್ಯ ರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಒತ್ತಡವು ಶಿಕ್ಷಣದ ಕಡೆಗೆ ಹೆಚ್ಚಾಗಿದ್ದು, ಆಟವಾಡುವುದು ಅಥವಾ ಕ್ರೀಡೆಗಳಲ್ಲಿ ಭಾಗವಹಿಸುವುದು ಕೇವಲ ಹವ್ಯಾಸವಾಗಿ ಮಾರ್ಪಟ್ಟಿದೆ ಎಂದು ವಿಷಾದಿಸಿದರು. ಅವರು ಯುವಜನರಿಗೆ ಸಲಹೆ ನೀಡುತ್ತಾ, ಕ್ರೀಡೆಗಳು ಫಿಟ್ ಆಗಿರಲು ಸಹಾಯ ಮಾಡುವುದಲ್ಲದೆ ತಂಡದಲ್ಲಿ ಸಂಘಟಿತರಾಗಿ ಕೆಲಸ ಮಾಡುವುದು, ಸ್ವಂತದ ಪ್ರತಿಕ್ರಿಯೆಯಲ್ಲಿ ಸುಧಾರಣೆ, ಮಾನಸಿಕ ತಂತ್ರಗಳ ಅಳವಡಿಕೆ, ಒತ್ತಡವನ್ನು ನಿಭಾಯಿಸುವುದು ಮತ್ತು ಮುಖ್ಯವಾಗಿ ಕ್ರೀಡಾ ಮನೋಭಾವ ಬೆಳವಣಿಗೆ ಇತ್ಯಾದಿಗಳಂತಹ ಅನೇಕ ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ಅವರು ಹೇಳಿದರು.
ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರು ಹಾಗೂ ಉಪಾಧ್ಯಕ್ಷರು ಆದ ಶ್ರೀಮತಿ ಇ.ವಿಜಯಾರವರು, ಮೈಸೂರು ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಕಾರ್ಯಕಾರಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಶಾಲೆಯಲ್ಲಿ ಉಪಸ್ಥಿತರಿದ್ದರು.
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…