ಜಿಲ್ಲೆಗಳು

ಲಲಿತಾ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಆಚರಣೆ

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು.

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ ಹಾಗೂ ತಂಡದ ಸ್ಪರ್ಧೆಗಳಲ್ಲಿ ಭಾಗವಹಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯ ಸಿಬ್ಬಂದಿಯಾಗಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಹಾಗೂ ಪ್ರಸ್ತುತ ಭಾರತೀಯ ಮಹಿಳಾ ಬಾಸ್ಕೆಟ್‌ಬಾಲ್ ತಂಡದ ನಾಯಕಿಯಾದ ಎಂ.ಎಸ್.ಭಾಂದವ್ಯ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಅಗರ್ವಾಲ್ ರವರು ವಿಜೇತರನ್ನು ಅಭಿನಂದಿಸುತ್ತಾ, ಪದಕ ಗೆದ್ದಿದ್ದರೂ, ಗೆಲ್ಲದಿದ್ದರೂ, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ವಿಜೇತರು ಎಂದು ನಾನು ದೃಢವಾಗಿ ನಂಬಿದ್ದೇನೆ ಎಂದು ಹೇಳಿದರು. ಅಂತ್ಯದಲ್ಲಿ ಕ್ರೀಡೆಯು ಫಿಟ್ನೆಸ್, ಆರೋಗ್ಯ ಮತ್ತು ಸಂತೋಷದ ವಿಷಯದಲ್ಲಿ ದೊಡ್ಡ ವ್ಯತ್ಯಾಸ ತರುತ್ತದೆ. ಭಾಗವಹಿಸುವವರ ನಡುವೆ ಸಾಮಾಜಿಕ ಸಂಬಂಧಗಳನ್ನು ಬೆಳೆಸಲು ಕ್ರೀಡೆಗಳು ಸಹಾಯ ಮಾಡಿ ಸಮಾಜದಲ್ಲಿನ ಅವರ ಪಾತ್ರದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಅಂತಿಮವಾಗಿ, ಸುತ್ತಮುತ್ತಲೂ ಹರ್ಷವನ್ನು ತರಲು ಮತ್ತು ಸಮುದಾಯಕ್ಕೆ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಲು ಇದು ವ್ಯಕ್ತಿಯನ್ನು ರೂಪಿಸುತ್ತದೆ ಎಂದು ಅವರು ತಿಳಿಸಿದರು.

ಶ್ರೀಮತಿ ಭಾಂದವ್ಯ ರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಒತ್ತಡವು ಶಿಕ್ಷಣದ ಕಡೆಗೆ ಹೆಚ್ಚಾಗಿದ್ದು, ಆಟವಾಡುವುದು ಅಥವಾ ಕ್ರೀಡೆಗಳಲ್ಲಿ ಭಾಗವಹಿಸುವುದು ಕೇವಲ ಹವ್ಯಾಸವಾಗಿ ಮಾರ್ಪಟ್ಟಿದೆ ಎಂದು ವಿಷಾದಿಸಿದರು. ಅವರು ಯುವಜನರಿಗೆ ಸಲಹೆ ನೀಡುತ್ತಾ, ಕ್ರೀಡೆಗಳು ಫಿಟ್ ಆಗಿರಲು ಸಹಾಯ ಮಾಡುವುದಲ್ಲದೆ ತಂಡದಲ್ಲಿ ಸಂಘಟಿತರಾಗಿ ಕೆಲಸ ಮಾಡುವುದು, ಸ್ವಂತದ ಪ್ರತಿಕ್ರಿಯೆಯಲ್ಲಿ ಸುಧಾರಣೆ, ಮಾನಸಿಕ ತಂತ್ರಗಳ ಅಳವಡಿಕೆ, ಒತ್ತಡವನ್ನು ನಿಭಾಯಿಸುವುದು ಮತ್ತು ಮುಖ್ಯವಾಗಿ ಕ್ರೀಡಾ ಮನೋಭಾವ ಬೆಳವಣಿಗೆ ಇತ್ಯಾದಿಗಳಂತಹ ಅನೇಕ ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರು ಹಾಗೂ ಉಪಾಧ್ಯಕ್ಷರು ಆದ ಶ್ರೀಮತಿ ಇ.ವಿಜಯಾರವರು, ಮೈಸೂರು ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಕಾರ್ಯಕಾರಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಶಾಲೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

13 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

13 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

13 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

14 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

14 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

14 hours ago