ಜಿಲ್ಲೆಗಳು

ಜಮೀನು ವಿವಾದ; ಕಾರು ಹತ್ತಿಸಿ ಮಹಿಳೆಯ ಕೊಲೆ

ನಾಗಮಂಗಲ: ಎರಡು ಕುಟುಂಬಗಳ ನಡುವಿನ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವುದರ ಜತೆಗೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಗಾಣಸಂದ್ರ ಗ್ರಾಮದ ರಾಮಕೃಷ್ಣಯ್ಯ ಎಂಬವರ ಪತ್ನಿ ಜಯಲಕ್ಷ್ಮಮ್ಮ (೫೦) ಕೊಲೆಯಾದವರು. ಜಮೀನು ಉಳುಮೆ ಮಾಡುತ್ತಿದ್ದ ಟ್ರಾಕ್ಟರ್ ಚಾಲಕ ನವೀನ್ ಮತ್ತು ಜಗಳ ಬಿಡಿಸಲು ಹೋದ ದೇವರಾಜು ಹಲ್ಲೆಗೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತ್ತಿದ್ದಾರೆ. ಇದೇ ಗ್ರಾಮದ ಗೌಡಯ್ಯ, ಮಗ ಅನಿಲ್‌ಕುಮಾರ್, ಸಂಬಂಧಿ ಬಸವರಾಜು ಸೇರಿದಂತೆ ಎಂಟು ಮಂದಿಯ ಗುಂಪು ಸೇರಿ ಮಹಿಳೆಯ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿ, ಇಬ್ಬರನ್ನು ಗಾಯಗೊಳಿಸಿರುವ ಆರೋಪಿಗಳಾಗಿದ್ದಾರೆ.

ಜಯಲಕ್ಷ್ಮಮ್ಮನಿಗೆ 10 ವರ್ಷಗಳ ಹಿಂದೆ ಗಾಣಸಂದ್ರ ಗ್ರಾಮದ ಸ.ನಂ.೮೪ರ ಬಗರ್ ಹುಕುಂ ಸಾಗುವಳಿ ಜಮೀನು ಮಂಜೂರಾಗಿ ಇದಕ್ಕೆ ಸಂಬಂಧಿಸಿದ ಭೂ ದಾಖಲೆಗಳೂ ಸಹ ಇವರ ಹೆಸರಿನಲ್ಲಿ ಚಾಲ್ತಿಯಲ್ಲಿದ್ದವು. ಅಂದಿನಿಂದ ಜಮೀನು ಉಳುಮೆ ಮಾಡಿಸುತ್ತಿದ್ದ ಇವರಿಗೆ ಈ ಜಮೀನು ನಮಗೆ ಸೇರಬೇಕೆಂದು ಇದೇ ಗ್ರಾಮದ ಗೌಡಯ್ಯ ಮತ್ತವರ ಕುಟುಂಬಸ್ಥರು ತೊಂದರೆ ಕೊಡುತ್ತಿದ್ದರು.
ಅಲ್ಲದೆ ಜಮೀನಿನಲ್ಲಿ ಹಾಕಿಸಿರುವ ಕೊಳವೆ ಬಾವಿ, ವಿದ್ಯುತ್ ವೈರನ್ನು ಕತ್ತರಿಸಿ ಹಾಕಿದ್ದರು. ಎರಡು ಕುಟುಂಬಗಳ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ನೆಲೆಸಿದ್ದ ಜಯಲಕ್ಷ್ಮಮ್ಮ ಜಮೀನು ಉಳುಮೆ ಮಾಡಿಸುವ ಸಲುವಾಗಿಯೇ ಭಾನುವಾರ ಗ್ರಾಮಕ್ಕೆ ಆಗಮಿಸಿದ್ದರು. ಜಮೀನು ಉಳುಮೆ ಮಾಡಿಸುತ್ತಿದ್ದ ವೇಳೆ ಏಕಾಏಕಿ ಬಂದ ಗೌಡಯ್ಯ, ಮಗ ಅನಿಲ್‌ಕುಮಾರ್ ಸೇರಿದಂತೆ ಎಂಟು ಮಂದಿಯ ಗುಂಪು ಗಲಾಟೆ ನಡೆಸಿ, ಟ್ರಾಕ್ಟರ್ ಚಾಲಕ ನವೀನ್ ಮತ್ತು ಜಗಳ ಬಿಡಿಸಲು ಬಂದ ದೇವರಾಜು ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಜಯಲಕ್ಷ್ಮಮ್ಮನ ಮೇಲೆ ಕಾರು ಹತ್ತಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಜಯಲಕ್ಷಮ್ಮ ಸ್ಥಳದಲ್ಲೇ ಮೃತಪಟ್ಟರು.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕಾರ್ಯ  ಪ್ರವೃತ್ತರಾದ ಬೆಳ್ಳೂರು ಠಾಣೆಯ ಪೊಲೀಸರು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನುಳಿದ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಆದಿಚುಂಚನಗಿರಿ ಆಸ್ಪತ್ರೆುಂಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಯಾಗಿರುವ ಜಯಲಕ್ಮಮ್ಮ ಮೃತದೇಹವನ್ನು ಇದೇ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು.


ಆರೋಪಿಗಳ ಪತ್ತೆಗೆ ಶೋಧ
ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳೂರು ಪೊಲೀಸರು ವಶಕ್ಕೆ ಪಡೆದಿರುವ ನಾಲ್ವರನ್ನು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಬಂಧಿಸಲಾಗಿದೆ. ಇನ್ನುಳಿದ ನಾಲ್ಕು ಮಂದಿ ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

 

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

4 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

4 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

4 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

4 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

4 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago