ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ತಡರಾತ್ರಿ ಮನೆ ಗೋಡೆ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮರೂರು ಗ್ರಾಮದ ಆಲದಮರದ ದೊಡ್ಡಿ ಶಿವಕ್ಕಿ ಎಂಬುವವರು ಭಾನುವಾರ ರಾತ್ರಿ ಊಟ ಮಾಡಿ ಮಲಗಿದ್ದರು ಬೆಳಗಿನ ಜಾವ ಸುಮಾರು 4ಗಂಟೆಯಲ್ಲಿ ಗೋಡೆ ದಿಢೀರ್ ಕುಸಿದಿದ್ದು ಮನೆಯಲ್ಲಿ ಮಲಗಿದ್ದ ಎಲ್ಲರೂ ಭಯಭೀತರಾಗಿ ಎದ್ದು ಗಾಬರಿಗೊಂಡಿದ್ದಾರೆ. ಗೋಡೆ ಮನೆ ಹೊರಭಾಗಕ್ಕೆ ಬಿದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಸಾಮಾಜಿಕ ಕಾರ್ಯಕರ್ತ ಸ್ನೇಹಜೀವಿ ರಾಜ್ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ.
ಮನೆಯ ಗೋಡೆ ಕುಸಿದಿರುವುದರಿಂದ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ತಕ್ಷಣ ಸೂಕ್ತ ಪರಿಹಾರ ನೀಡಬೇಕು. – ಸ್ನೇಹಜೀವಿ ರಾಜು
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…