ಜಿಲ್ಲೆಗಳು

‘ಕೀಳರಿಮೆ ಬಿಟ್ಟರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು’

ಕರಾಮುವಿಯಿಂದ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ ನೀಡಿ ಎಸ್‌ಪಿ ಚೇತನ್ ಅಭಿಮತ

ಮೈಸೂರು: ಕೀಳರಿಮೆ ಬಿಟ್ಟು ನಿರಂತರವಾಗಿ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಹೇಳಿದರು.

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ಬರುವ ಅನೇಕ ವಿದ್ಯಾರ್ಥಿಗಳಿಗೆ ‘ನಾನು ಹಳ್ಳಿಯವನು, ಇಂಗ್ಲಿಷ್ ಬರುವುದಿಲ್ಲ, ನಮ್ಮಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವೆ’ ಎಂಬ ಕೀಳರಿಮೆ ಇರುತ್ತದೆ. ಇಂತಹ ಭಾವನೆಗಳನ್ನು ತೆಗೆದು ಹಾಕಿ ನಿರಂತರವಾಗಿ, ಕ್ರಮಬದ್ಧವಾಗಿ ಅಭ್ಯಾಸದಲ್ಲಿ ತೊಡಗಿಕೊಂಡಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದು ಕಿವಿಮಾತು ಹೇಳಿದರು.

ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಯಾವುದೋ ಒಂದು ಅಥವಾ ಕೆಲವು ವಿಷಯಗಳನ್ನು ಮಾತ್ರ ಓದಿರುತ್ತೀರಾ? ಆದರೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕೆಂದರೆ ಎಲ್ಲ ವಿಷಯಗಳ ಜ್ಞಾನವೂ ಇರಬೇಕು ಮತ್ತು ಓದಬೇಕು. ಹಾಗಾಗಿ, ಆರಂಭಿಕವಾಗಿ ೫ನೇ ತರಗತಿಯಿಂದ ೧೦ ತರಗತಿಯ ಎಲ್ಲ ಪುಸ್ತಕಗಳನ್ನು ಒಂದೆರಡು ಬಾರಿ ಓದುವುದು ಒಳ್ಳೆಯದು. ಆನಂತರ ನಿಮ್ಮ ಪರೀಕ್ಷೆಯ ಸಿಲಬಸ್‌ಗಳನ್ನು ಓದಲು ಮತ್ತು ಅರ್ಥ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ೭ರಿಂದ ೫ ವರ್ಷಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಯನ್ನು ಇಟ್ಟುಕೊಂಡು ಅಭ್ಯಾಸ ಮಾಡಿ ಎಂದು ತಿಳಿಸಿದರು.

ಕರಾಮುವಿ ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರನ್ನು ಸನ್ಮಾನಿಸಲಾಯಿತು. ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಪರೀಕ್ಷಾಂಗ ಕುಲಸಚಿವ ಪ್ರವೀಣ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಹಾಜರಿದ್ದರು. ಸುಮಾರು ೧೦೦ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

 

 

 

 

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago