ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ .
ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಸೆರೆ ಸಿಕ್ಕ ಚಿರತೆ : ಹಲವಾರು ಹಸು, ಮೇಕೆಗಳು ಸಾಲದು ಎಂಬಂತೆ ಮನುಷ್ಯನನ್ನು ಸಹ ಕೊಂದು ಈ ಭಾಗದ ಜನರ ನಿದ್ದೆಗೆಡಿಸಿತ್ತು.ಹಲವಾರು ದಿನಗಳಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೂ ಸಹ ನಿದ್ದೆಗೆಡಿಸಿತ್ತು. ಇದರಿಂದ ಎಲ್ಲರಿಗೂ ತೊಂದರೆಯಾಗಿತ್ತು. ಕೊನೆಗೂ ಕೆಂಚಯ್ಯನದೊಡ್ಡಿ ಬಳಿ ಸಿಕ್ಕಿ ಬಿದ್ದಿದೆ.
ನಿಟ್ಟುಸಿರು ಬಿಟ್ಟ ಜನತೆ : ಈ ಭಾಗದ ಜನತೆ ಕಳೆದ ಹಲವಾರು ದಿನಗಳಿಂದ ಜೀವ ಭಯದಲ್ಲೇ ಕಾಲ ದೂಡುತ್ತಿದ್ದರು.ಕಾಡಿಗೆ ತೆರಳಲು ಹಸು ಕರುಗಳಿಗೆ ಮೇವು ತರಲು ಸಹ ಜನ ಕಷ್ಟ ಪಡುವಂತಹ ಸಮಯ ತುಂಬಾ ಇತ್ತು.. ಚಿರತೆ ಭಯದಲ್ಲಿ ಜನ ತುಂಬಾ ಹೈರಾಣಗಿದ್ದರು.ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ಚಿರತೆ ಸೆರೆ ಸಿಕ್ಕಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…