ಮಂಡ್ಯ : ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ವಾಸವಿದ್ದ ತುಮಕೂರು ಮೂಲದ ನಿವಾಸಿ ಜಯರಾಂ ಬಿನ್ ಮುನ್ನಾಸ್ವಾಮಿ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಳಿಸಿದೆ.
ಬೆಳಿಗ್ಗೆ ಕಬ್ಬು ಕಟಾವು ಮಾಡುವ ಸಲುವಾಗಿ ರಾಯಸಮುದ್ರ ಬಳಿ ತೆರಳಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದೆ. ತೀವ್ರ ಗಾಯಗೊಂಡ ಇವರನ್ನು ಕೂಡಲೇ ಸಾರ್ವಜನಿಕರ ನೆರವಿನಿಂದ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂಋಇನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ.





