Mysore
29
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಚಿರತೆ ದಾಳಿ: ಎರಡು ಹಸು ಬಲಿ

ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ

ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.

ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ ಪುತ್ರ ನಂಜುಂಡಸ್ವಾಮಿ ಸೇರಿದ ಈ ಹಸುಗಳನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು.ಸಂಜೆ ೪.೩೦ ಗಂಟೆಯ ಸಮಯದಲ್ಲಿ ದಾಳಿ ಮಾಡಿದ ಚಿರತೆ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೊಂದು ಹಸು ತೀವ್ರವಾಗಿ ಗಾಯಗೊಂಡಿದೆ. ಈ ಘಟನೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನರಲ್ಲಿ ಅತಂಕ ಸೃಷ್ಟಿಯಾಗಿದೆ.

ಈ ಬಗ್ಗೆ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ದಿನ ಒಂದಲ್ಲ ಒಂದು ಪ್ರಾಣಿಯನ್ನು ಚಿರತೆಗಳು ಬಲಿ ತೆಗೆದುಕೊಳ್ಳುತ್ತಿವೆ. ಇದರಿಂದ ನನಗೆ ೧ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಲ್ಲದೆ ಜೀವ ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಅರಣ್ಯ ಅಧಿಕಾರಿಗಳು ಕ್ರಮಕೈಗೊಂಡು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಜನರು ನೆಮ್ಮದಿಯಿಂದ ಬಾಳುವಂತೆ ರಕ್ಷಣೆ ನಿಡುವಂತೆ ಹಾಗೂ ಮೃತ ಹಸುಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!