ಜಿಲ್ಲೆಗಳು

ಹುಣಸೂರು: ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು

ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ.

ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡಿದ್ದು, ರವಿಯವರ ಪತ್ನಿ ಕವಿತಾ ಎಂಬವರು ಮನೆ ಮುಂದಿನ ಜಮೀನಿಗೆ ತೆರಳುತ್ತಿದ್ದ ವೇಳೆ ಚಿರತೆ ಕಂಡು ಗಾಬರಿಗೊಂಡಿದ್ದಾರೆ.

ಈ ವೇಳೆ ಗ್ರಾಮಸ್ಥರು ವಿಷಯ ತಿಳಿದು ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರೂ ಸಿಗಲಿಲ್ಲ. ಮತ್ತೆ ರಾತ್ರಿ ತೆಂಗಿನ ಮರದ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮೊಬೈಲ್ ಮೂಲಕ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆಮಾಡಿದ್ದು, ಜನರು ಜಮೀನುಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ಸರೆ ಹಿಡಿದು ಗ್ರಾಮಸ್ಥರಲ್ಲಿನ ಆತಂಕವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸೆರೆ ಹಿಡಿಯಲು ಕ್ರಮ: ಈಗಾಗಲೇ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲಾಗುವುದು. ಜನರು ಎಚ್ಚರಿಕೆಯಿಂದ ಓಡಾಡಬೇಕೆಂದು ಪ್ರಾದೇಶಿಕ ಅರಣ್ಯ ವಿಭಾಗದ ಆರ್‌ಎಫ್‌ಒ ನಂದಕುವಾರ್ ಮನವಿ ವಾಡಿದ್ದಾರೆ.

 

andolana

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

9 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

9 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

9 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

10 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

10 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

10 hours ago