ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ.
ಬೆಟ್ಟದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದ್ದು, ಮೊಬೈಲ್ ನಲ್ಲಿ ಪೊಟೋ ತೆಗೆದಿದ್ದಾರೆ.
ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬೆಟ್ಟದ ತಪ್ಪಲಿನ ಕಿಲಗೆರೆ ಗ್ರಾಮದ ಹುಲಗಾದ್ರಿನಾಯ್ಕ ಎಂಬುವರಿಗೆ ಸೇರಿದ ಕುರಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ದನಗಾಹಿಗಳು ಬೆಟ್ಟದ ತಪ್ಪಲಿಗೆ ತಮ್ಮ ಜಾನುವಾರು ಮೇಯಿಸಿಕೊಂಡು ಬರಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಭಕ್ತಾದಿಗಳು ಬೆಟ್ಟದಲ್ಲಿ ಪೂಜೆ ಸಲ್ಲಿಸಲು ಮುಂಜಾನೆ, ರಾತ್ರಿ ವೇಳೆ ದ್ವಿ ಚಕ್ರ ವಾಹನಗಳಲ್ಲಿ ತೆರಳುತ್ತಿದ್ದು, ಈಗ ಅವರೆಲ್ಲ ಭಯಗೊಂಡಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಟ್ಟದ ತಪ್ಪಲಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯುಂತೆ ಒತ್ತಾಯಿಸಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…