ಜಿಲ್ಲೆಗಳು

ಸಿಎಫ್‌ಟಿಆರ್‌ಐ ಕ್ಯಾಂಪಸ್ಸಿನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ

ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್‌ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ.

ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ರಾತ್ರಿ ಚಿರತೆ ಓಡಾಡಿರುವುದನ್ನು ಸಂಸ್ಥೆಯ ಕಾವಲು ಸಿಬ್ಬಂದಿ ಗಮನಿಸಿದ್ದು, ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಕಾರ್ಯ ಪ್ರವೃತ್ತವಾಗಿದ್ದು 10 ಮಂದಿ ಸಿಬ್ಬಂದಿಗಳನ್ನು ಚಿರತೆ ಜಾಡು ಪತ್ತೆಗೆ ನೇಮಿಸಲಾಗಿದೆ. ಸದ್ಯ ಕ್ಯಾಂಪಸ್ಸಿನಲ್ಲಿ ಒಂದು ಬೋನು ಇಡಲಾಗಿದೆ. ಅಗತ್ಯ ಬಿದ್ದರೆ ಮತ್ತೊಂದು ಬೋನು ಇಡಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಂಪಸ್‌ ನಲ್ಲಿ ಸದ್ಯ ರಾತ್ರಿ ದೃಶ್ಯಗಳನ್ನು ಸೆರೆ ಹಿಡಿಯುವ ಸಿಸಿ ಕೆಮೆರಾ ಗಳಿಲ್ಲ. ಇದಕ್ಕಾಗಿ ತಕ್ಷಣವೇ ನಾಲ್ಕು ನೈಟ್ ಕ್ಯಾಪ್ಚರಿಂಗ್‌ ಸಿಸಿ ಕೆಮೆರಾ ಅಳವಡಿಸಲಾಗುತ್ತಿದೆ. ಸಿಎಫ್‌ ಟಿಆರ್ ಐ ಕ್ಯಾಂಪಸ್ ನಲ್ಲಿ ಇರುವ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ಆಂದೋಲನಕ್ಕೆ ಮಾಹಿತಿ ನೀಡಿದ್ದಾರೆ.

ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್‌ಬಿಐ) ಆವರಣದಲ್ಲಿ ಚಿರತೆಯ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಆರ್‌ ಬಿ ಐ ಕ್ಯಾಂಪಸ್‌ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಪತ್ತೆಯಾಗಿರಲಿಲ್ಲ. ಈ ಹಿಂದೆ ಬೆಮೆಲ್‌ ಕ್ಯಾಂಪಸ್‌, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.

ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ಭಯ ಪಡುವ ಅಗತ್ಯವಿಲ್ಲ. ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

13 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

37 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

41 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago