ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ
ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ.
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್‌ಬಿಐ) ಆವರಣದಲ್ಲಿ ಚಿರತೆಯ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.
ಆರ್ ಬಿ ಐ ಕ್ಯಾಂಪಸ್ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಪತ್ತೆಯಾಗಿರಲಿಲ್ಲ. ಈ ಹಿಂದೆ ಬೆಮೆಲ್ ಕ್ಯಾಂಪಸ್, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.
ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ಭಯ ಪಡುವ ಅಗತ್ಯವಿಲ್ಲ. ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…