ಮೈಸೂರು : ಸರಗೂರು ಸಮೀಪದ ಹೆಬ್ಬಲಗುಪ್ಪೆ ಗ್ರಾಮಕ್ಕೆ ರಸ್ತೆ ಬದಿಯಲ್ಲಿ ಕಳೆದ ವಾರದ ಹಿಂದೆ ಚಿರತೆೊಂಂದು ಪ್ರತ್ಯಕ್ಷವಾಗಿದ್ದು, ಅದನ್ನು ಕಂಡು ಗ್ರಾಮಸ್ತರು ಭಯಭೀತರಾಗಿದ್ದಾರೆ.
ಜಕ್ಕಹಳ್ಳಿ ಗ್ರಾಮದಿಂದ ಹೆಬ್ಬಲಗುಪ್ಪೆ ಗ್ರಾಮಕ್ಕೆ ಹೋಗುವಾಗ ಇಂದು ಸಂಜೆ 6.40 ರಲ್ಲಿ ಕೆಲಸ ಮುಗಿಸಿ ಮನೆಯತ್ತ ನಡೆದುಕೊಂಡು ಹೋಗುವಾಗ ತೋಟದಿಂದ ರಸ್ತೆ ದಾಟುತ್ತಿದ್ದ ಚಿರತೆಯನ್ನು ನೋಡಿ ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಕಂಡುಬಂದಾಗಿನಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಭಯದ ವಾತಾವರಣದಲ್ಲಿ ನಿದ್ದೆಗೆಡುವಂತಾಗಿದೆ. ಇದಲ್ಲದೆ ಚಿರತೆ ಹಸುಗಳ ರಾಸು ಹೋಗುವಾಗ ಚಿರತೆ ಎರಗಲು ಮುಂದಾಗುತ್ತಿದ್ದು ಸ್ಥಳದಲ್ಲಿದ್ದ ಗ್ರಾಮದವರು ಜೋರಾಗಿ ಕೂಗಿಕೊಂಡಾಗ ಚಿರತೆ ವಾಪಾಸ್ಸು ತೋಟದತ್ತ ಓಡಿ ಹೋಗಿವೆ. ನಂತರ ಭಯಗೊಂಡು ಊರಿಗೆ ಬಂದು ಮಾಹಿತಿ ನೀಡಿದ್ದಾರೆ.ಸಾಯಂಕಾಲದ ವೇಳೆಯಲ್ಲಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗಲು ಭಯ ಪಡುತ್ತಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ ರಾಜೇಶ್ ಎಂಬುವವರು ಹೆಬ್ಬಲಗುಪ್ಪೆ ಹಾಗೂ ಜಕ್ಕಹಳ್ಳಿ ಗ್ರಾಮದ ಸುತ್ತಮುತ್ತ ಇರುವ ಜಮೀನಿನ ಭಾಗದಲ್ಲಿ ಚಿರತೆಯು ಬಂದಿರುವುದು ಖಚಿತವಾಗಿದೆ.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…