ಹುಲ್ಲಹಳ್ಳಿ: ಹುಲ್ಲಹಳ್ಳಿ ಮತ್ತು ಕಾರ್ಯಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ರೈತರಲ್ಲಿ ಆತಂಕ ಮೂಡಿಸಿದೆ.
ಮಂಗಳವಾರ 8ಗಂಟೆಯಲ್ಲಿ ವಾಯುವಿಹಾರಕ್ಕೆ ತೆರಳಿದ ಚಂದ್ರು ಎಂಬವರಿಗೆ ರಸ್ತೆ ಬದಿಯ ಜೋಳದ ಕಡ್ಡಿಗಳ ನಡುವಿನ ಪೊದೆಯೊಳಗೆ ಮಲಗಿ ಚಿರತೆ ಗುಟುರು ಶಬ್ದ ಕೇಳಿ ಬಂದಿದೆ. ಇದಾದ ಬಳಿಕೆ ಕೆಲ ನಿಮಿಷಗಳಲ್ಲಿ ತಮ್ಮ ಸ್ನೇಹಿತರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಎಲ್ಲರೂ ಬಂದು ಚಿರತೆ ಇದ್ದ ಸ್ಥಳದಲ್ಲಿ ನಿಂತು ಅದರ ಶಬ್ಧವನ್ನು ಮೊಬೈಲ್‌ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದು, ಆ ಆಡಿಯೋ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ದುಗ್ಗಳ್ಳಿ ಮತ್ತು ಶೆಟ್ಟಿಹಳ್ಳಿ ರಸ್ತೆಯಲ್ಲಿ ಆಟೋ ಚಾಲಕನಿಗೆ ಹುಲಿ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದಾದ ಬಳಿಕ ಚಿರತೆಯ ಸದ್ದು ಕೇಳಿ ಬಂದಿರುವುದು ಮತ್ತಷ್ಟು ಭಯಗೊಳಿಸಿದೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅನಾಹುತ ಸಂಭವಿಸುವ ಮುನ್ನ ಚಿರತೆ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…