ಜಿಲ್ಲೆಗಳು

ತಿ. ನರಸೀಪುರ : ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷ, ಜನರಲ್ಲಿ ಭೀತಿ

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ.

ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಗಾಬರಿಗೊಂಡ ಅರುಣ್ ಅಲ್ಲಿಂದ ಓಡಿ ಬಂದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಉಪವಲಯಅರಣ್ಯಾಧಿಕಾರಿ ಯಮುನಾ ಮತ್ತು ಸಿಬ್ಬಂದಿ, ಬಂಡಿಪುರ ಹುಲಿ ರಕ್ಷಣಾ ಕಾರ್ಯಪಡೆ ತಂಡದವರು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಜಾಗಕ್ಕೆ ತೆರಳಿ ಪರಿಶೀಲಿಸಿ ಗುರುತು ಪತ್ತೆ ಹಚ್ಚಿ ಬೋನನ್ನು ಇರಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರು, ಈಗಾಗಲೇ ಚಿರತೆ ಸೆರೆ ಹಿಡಿಯಲು ತೀವ್ರ ಕಾರ್ಯಾಚಾರಣೆ ನಡೆಯುತ್ತಿದೆ. ಮಾಹಿತಿ ಇರುವೆಡೆಯೆಲ್ಲಾ ಬೋನನ್ನು ಇರಿಸಲಾಗಿದೆ.

ಡ್ರೋಣ್ ಕ್ಯಾಮೆರಾ ಅಳವಡಿಸಲು ಸಿದ್ಧವಿದ್ದು, ಮಳೆ ಇರುವುದರಿಂದ ಡ್ರೋಣ್ ಬಿಡಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ಎರಡು ದಿನದಲ್ಲಿ ಡ್ರೋಣ್ ಕ್ಯಾಮರಾ ಬಳಸಿ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದರು

ರೈತ ಮುಖಂಡ ಕಳ್ಳಿಪುರ ಮಹಾದೇವಸ್ವಾಮಿ, , ಎಂ. ಎಲ್. ಹುಂಡಿ, ಕಳ್ಳಿಪುರ, ಕೇತುಪುರ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಜಾನುವಾರು ಮತ್ತು ಮೇಕೆಯನ್ನು ಕಾಡಿಗೆ ಮೇಯಿಸಲು ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಶೀಘ್ರ ಚಿರತೆ ಸೆರೆಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಮದ ಮುಖಂಡರು ಹಾಜರಿದ್ದರು,

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago