ಜಿಲ್ಲೆಗಳು

ಚಿರತೆ ದಾಳಿ ಸ್ಥಳಗಳಿಗೆ ಸಿಸಿಎಫ್ ರಾಜೀವ್ ಭೇಟಿ

ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ನಂತರ ಕಳೆದ ತಿಂಗಳಲ್ಲಿ ಚಿರತೆ ದಾಳಿಗೆ ತುತ್ತಾದ ಎಂ.ಎಲ್. ಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಮೃತಪಟ್ಟ ಸ್ಥಳ ಪರಿಶೀಲಿಸಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಉಕ್ಕಲಗೆರೆ ಬೆಟ್ಟ ಸುತ್ತಲೂ ಸ್ಥಳ ಪರಿಶೀಲಿಸುವ, ಕಾರ್ಯಾಚರಣೆ ವೈಖರಿಯ ಬಗ್ಗೆ ವಿವರ ಪಡೆದರು.
ಚಿರತೆಯ ಕಾರ್ಯಕ್ಷೇತ್ರ ಎನ್ನಲಾದ ವಡ್ಗಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಕಾರ್ಯಾಚರಣೆ  ವೈಖರಿ ವೀಕ್ಷಿಸಿ ಕೆಲವೊಂದು ಉಪಯುಕ್ತ ಸಲಹೆ ನೀಡಿದರು.
ಅಲ್ಲದೆ ಅರಣ್ಯ ಇಲಾಖೆ ಬೆಟ್ಟದಲ್ಲಿ ಚಿರತೆ ಸೆರೆಹಿಡಿಯಲು ಅಳವಡಿಸಲಾಗಿರುವ ಬೋನು ಮತ್ತು ಕ್ಯಾಮೆರಾಗಳನ್ನು ವೀಕ್ಷಿಸಿ ಚಿರತೆ ಸೆರೆ ಹಿಡಿಯುವ ಸಂಬಂಧ ಸಿಬ್ಬಂದಿಗೆ ಕೆಲ ಮಾಹಿತಿ ನೀಡಿದರಲ್ಲದೆ, ಶೀಘ್ರವಾಗಿ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ಸಿಎಫ್‌ಓ ಡಾ. ಮಾಲತಿ ಪ್ರಿಯ, ಡಿಸಿಎಫ್‌ಗಳಾದ ಕಮಲಾ ಕರಿಕಾಳನ್, ಆರ್‌ಎಫ್‌ಓ ಸೈಯದ್ ನದೀಮ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

9 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

9 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

9 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

10 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago