ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಹುಲಿಗಳ ಬದಲಾಗಿ ಚಿರತೆ ಪ್ರತ್ಯಕ್ಷವಾಗಿರುವುದು ಕಂಡುಬಂದಿದೆ.
ದೊಡ್ಡ ಕಾನ್ಯಾ ಎಂಬ ಗ್ರಾಮದ ಬಳಿ ಕಳೆದ ಮಂಗಳವಾರದಿಂದ ಎರಡು ಹುಲಿಗಳು ಓಡಾಡುತ್ತಿವೆ ಎಂಬ ಮಾಹಿತಿಯನ್ನು ಅರಣ್ಯ ಇಲಾಖೆಗೆ ಇಲ್ಲಿನ ಗ್ರಾಮಸ್ಥರು ನೀಡಿದ್ದರು. ಈ ವಿಚಾರದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ಅರಣ್ಯ ಇಲಾಖೆಯವರು ಸ್ಥಳದ ಪರಿಶೀಲನೆ ನಡೆಸಿದ ಬಳಿಕ ಗ್ರಾಮಸ್ಥರ ಹೇಳಿಕೆಗಳ ಆಧಾರದ ಮೇಲೆ ಹುಲಿಗಳು ತಿರುಗಾಡುತ್ತಿವೆ ಎಂಬುದನ್ನು ಖಚಿತ ಪಡಿಸಿಕೊಂಡು ಆ ಸ್ಥಳಕ್ಕೆ ಸಿಸಿಟಿವಿಯನ್ನು ಅಳವಡಿಸಿದ್ದರು.
ಈ ಗ್ರಾಮದಲ್ಲಿ ಸಿಸಿಟಿವಿಯನ್ನು ಅಳವಡಿಸಿರುವ ತೋಟದ ಮನೆಯ ಮುಂದಿರುವ ಗೇಟ್ ನಲ್ಲಿ ಹುಲಿಗಳ ಬದಲಾಗಿ ಎರಡು ಚಿರತೆಗಳು ಓಡಾಟ ನಡೆಸಿರುವ ದೃಶ್ಯ ಕಂಡು ಬಂದಿದ್ದರಿಂದ, ಈ ಸಂಬಂಧ ಅರಣ್ಯಾಧಿಕಾರಿಗಳು ಸಿಸಿಟಿವಿಯನ್ನು ಪರಿಶೀಲಿಸಿದಾಗ ಆ ಸ್ಥಳದಲ್ಲಿ ಓಡಾಟ ನಡೆಸಿರುವುದು ಹುಲಿಗಳಲ್ಲ ಚಿರತೆಗಳು ಎಂಬುದು ತಿಳಿದುದ್ದರಿಂದ ತನಿಖೆ ನಡೆಸಿ ಚಿರತೆಗಳ ಸೆರೆಗೆ ಸಿಬ್ಬಂದಿಯು ಕಾರ್ಯಾಚಾರಣೆ ಮುಂದುವರೆಸಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…