ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ ಆರಂಭವಾಗಿದೆ. ಆನೆಗಳಿಗೆ ತರಬೇತಿ ನೀಡುವ ಸಲುವಾಗಿೆುೀಂ ಜಂಬೂ ಸವಾರಿ ಹೊರಡುವ ಮಾರ್ಗದಲ್ಲಿ ನವರಾತ್ರಿಗೆ ಮೂರು ದಿನ ಮುನ್ನವೇ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ರಾತ್ರಿ ದೀಪದ ಬೆಳಕಿಗೂ ಜಗ್ಗದೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ರಾಜಮಾರ್ಗದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿಯನ್ನು ಹೊರಿಸಲಾಗಿತ್ತು.
ಅರಣ್ಯ ಇಲಾಖೆಯ ಮನವಿಗೆ ಸ್ಪಂದಿಸಿದ ಸೆಸ್ಕ್ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಅರಮನೆ ದ್ವಾರದಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್‌ಎಂಸಿ ವೃತ್ತ ಜಂಬೂ ಬಜಾರ್, ಹೈವೇ ವೃತ್ತದ ಮೂಲಕ ಬನ್ನಿ ಮಂಟಪದ ಕವಾಯತು ಮೈದಾನದವರೆಗೆ ಐದು ಕಿಮೀ ರಸ್ತೆಗೆ ಶುಕ್ರವಾರ ಸಂಜೆಯಿಂದಲೇ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ೭ ಗಂಟೆಗೆ ದೀಪ ಝಗಮಗಿಸಿದ್ದು, ಈ ಬೆಳಕಿನಲ್ಲಿ ಗಜಪಡೆಗಳು ತಾಲೀಮು ನಡೆಸಿದವು.
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…