ಮಂಡ್ಯ : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಫೆ.3ರಂದು ಬೆಳಿಗ್ಗೆ 6 ಗಂಟೆಯಿಂದ ಫೆ.4ರ ಮಧ್ಯರಾತ್ರಿಯವರೆಗೆ ಮಳವಳ್ಳಿ ಪಟ್ಟಣ ಹಾಗೂ ಮಳವಳ್ಳಿ ಪಟ್ಟಣದ 5 ಕಿ.ಮೀ. ಸುತ್ತಳತೆ ವ್ಯಾಪ್ತಿಯಲ್ಲಿ ಎಲ್ಲ ಮಾದರಿಯ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಹಾಗೂ ಮದ್ಯ ಮಾರಾಟ, ಮದ್ಯ ಸಂಗ್ರಹಣೆ, ಮದ್ಯ ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಚ್. ಎನ್.ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.