ಜಿಲ್ಲೆಗಳು

ಜೀವಂತ ಗೂಬೆ ಸಾಗಾಣೆ : ಇಬ್ಬರ ಬಂಧನ

ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.

ಗೂಬೆವೊಂದನ್ನು ಹಿಡಿದು ಬೈಕ್ ಮೂಲಕ  ಸಾಗಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂಬುವವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಸಾಗಾಣೆ ಮಾಡಲು ಬಳಸಿದ್ದ ಬೈಕ್ ಮತ್ತು ಜೀವಂತ ಗೂಬೆಯನ್ನು ಜಪ್ತಿ ಮಾಡಲಾಗಿದೆ.

ದಾಳಿಯಲ್ಲಿ ಅರಣ್ಯ ಸಂಚಾರಿ (ಎಫ್.ಎಂ.ಎಸ್.) ದಳದ ಸಬ್ ಇನ್ಸ್‌ಪೆಕ್ಟರ್ ವಿಜಯ್ ರಾಜ್, ಸಿಬ್ಬಂದಿಗಳಾದ ಮುಖ್ಯಪೇದೆಗಳಾದ ತಖೀಉಲ್ಲಾ, ರಾಮಚಂದ್ರ, ಸ್ವಾಮಿ, ಬಸವರಾಜು, ಚಾಲಕ ಪ್ರಭಾಕರ್ ಇದ್ದರೂ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

1 min ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago