ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ವಾಹನದ ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಸಮೀಪ ಜರುಗಿದೆ.
ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ ( 26) ಎಂಬುವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯಾಗಿದ್ದಾರೆ.
ಪಟ್ಟಣದ ಜಡೇಸ್ವಾಮಿ ಎಂಬವರಿಗೆ ಸೇರಿದ ಲಾರಿ ಮಂಡ್ಯದ ಸಕ್ಕರೆ ಕಾರ್ಖಾನೆಯಿಂದ ಸಕ್ಕರೆ ತುಂಬಿಕೊಂಡು ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಕೇಶಿಫ್ ರಸ್ತೆ ಕಾಮಗಾರಿಗೆ ಬಳಸುತ್ತಿದ್ದ ಟಿಪ್ಪರ್ ನ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟಿಪ್ಪರ್ ಹಾಗೂ ಲಾರಿ ಜಖಂ ಗೊಂಡಿದ್ದು ಟಿಪ್ಪರ್ ವಾಹನದ ಎಡಬದಿಯಲ್ಲಿ ಕುಳಿತಿದ್ದ ಕ್ಲೀನರ್ ಎರಡು ವಾಹನದ ಮಧ್ಯೆ ಸಿಲುಕಿಕೊಂಡಿದ್ದಾನೆ. ನಂತರ ಸಾರ್ವಜನಿಕರು ಸಹಕಾರದಿಂದ ವಾಹನದಿಂದ ರಕ್ಷಿಸಿದ್ದಾರೆ. ಆದರೂ ಸಹ ಕ್ಲೀನರ್ ನ ಎಡ ಕೈ ಕಟ್ಟಾಗಿದ್ದು ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…