Light
Dark

ಹನೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಹನೂರು: ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ.

ಘಟನೆಯ ವಿವರ : ಮೈಸೂರಿನಿಂದ ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ರಾಮಾಪುರ ಹಾಗೂ ನಾಲ್ ರೋಡ್ ಅರಣ್ಯ ಪ್ರದೇಶದ ಮಾರ್ಗ ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸುದ್ದಿ ತಿಳಿದ ತಕ್ಷಣ ರಾಮಪುರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ