ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್‌ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂದ್ರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಂದು ಸಂಜೆ ೪.೩೦ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಡಾ.ಅರ್ಪಿತಾ ಸಿಂಹ, ಮಹಾಪೌರ ಶಿವಕುಮಾರ್, ನಗರಪಾಲಿಕೆ ಸದಸ್ಯ ಎಂ.ಡಿ.ಆಗರಾಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಟಕ ನಿರ್ದೇಶಕ ರಾಜಪ್ಪ, ವಯೋಲಿನ್ ಕಲಾವಿದರಾದ ಎಚ್.ಕೆ.ನರಸಿಂಹ ಮೂರ್ತಿ, ಎಚ್.ಎಸ್.ತಾಂಡವಮೂರ್ತಿ, ಡೋಲು ವಿದ್ವಾನ್ ಎಸ್.ಪುಟ್ಟರಾಜು, ವೀಣಾ ವಾದಕಿ ಎಸ್.ರಾಜಲಕ್ಷ್ಮೀ, ಮೃದಂಗ ವಿದ್ವಾನ್ ವಿ.ಆರ್.ರಾಜಗೋಪಾಲ್, ಪಿಟೀಲು ವಾದಕ ಡಿ.ನಾರಾಯಣ, ಕ್ಲಾರಿಯೋ ನೆಟ್ ವಾದಕ ಡಾ.ಸಿ.ಪಿ.ಕೃಷ್ಣಮೂರ್ತಿ ಅವರುಗಳನ್ನು ಸನ್ಮಾನಿಸಲಾಗುವುದು.
ಬಳಿಕ ಆಕಾಶವಾಣಿ ಕಲಾವಿದರಾದ ಎಂ.ಎ.ಕೃಷ್ಣಮೂರ್ತಿ ಮತ್ತು ಜಯಲಕ್ಷ್ಮೀ ಕುಟುಂಬ ವರ್ಗದ ಎಂ.ಕೆ.ವಾಸವಿ ಹಾಗೂ ಕೆ.ಎಂ.ಅರ್ಪಿತ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ತಿ.ನರಸೀಪುರ ತಾಲ್ಲೂಕು ಕಿರಗಸೂರು ಗ್ರಾಮದ ನಾಟಕ ನಿರ್ದೇಶಕ ರಾಜಪ್ಪ ಮತ್ತು ವೃಂದದವರು ರಂಗಗೀತೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಟ್ರಸ್ಟ್‌ನ ಅಧ್ಯಕ್ಷ ಎ.ಕಾಂತರಾಜು, ಖಜಾಂಚಿ ಬಿ.ಆರ್.ಜ್ಯೋತಿ, ನಿರ್ದೇಶಕರುಗಳಾದ ಕೆ.ಮಂಜುನಾಥ್, ಎ.ಸುಗುಣ ಕಾಂತರಾಜು, ಎಂ.ಎಸ್.ಲಕ್ಷ್ಮೀಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…