ಜಿಲ್ಲೆಗಳು

ಕೆಂಪೇಗೌಡರ ಉದ್ಯಾನಕ್ಕೆ ಮಾದಪ್ಪ ಸನ್ನಿಧಿಯ ಮಣ್ಣು

ಹನೂರು: ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹ ರಥ ಭಾನುವಾರ ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆ ತಾಲ್ಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು

ಮಲೆಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಎಲ್ಲೇಮಾಳ ಗ್ರಾಮದ ಮೂಲಕ ಹನೂರು ಪಟ್ಟಣಕ್ಕೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಮಹಿಳೆಯರು ಹಾಗೂ ಪುಟಾಣಿಗಳು ಪೂರ್ಣಕುಂಭ ಸ್ವಾಗತ ಕೋರುವ ಮೂಲಕ ಬರಮಾಡಿಕೊಳ್ಳಲಾಯಿತು.

ಈ ವೇಳೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗರಾಜು ಗೌಡ ಮಾತನಾಡಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಿಸುತ್ತಿರುವುದು ಸಂತಸದ ವಿಚಾರ,ನಾಡಪ್ರಭು ಕೆಂಪೇಗೌಡರು ಬೆಂಗಳೂರಿನಲ್ಲಿ ನಿರ್ಮಾಣ ಮಾಡಿರುವ ಕೆರೆಗಳು ಈ ನಾಡಿಗೆ ಅದ್ಬುತ ಕೊಡುಗೆಗಳಾಗಿವೆ. ಪ್ರತಿಯೊಬ್ಬರು ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳಾದ ಹರೀಶ್, ಆನಂದ್ ಕುಮಾರ್ ,ತಹಸೀಲ್ದಾರ್ ಆನಂದಯ್ಯ ಮುಖ್ಯಾಧಿಕಾರಿ ಮೂರ್ತಿ, ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ದತ್ತೇಶ್ ಕುಮಾರ್ ,ಬಿಜೆಪಿ ಮುಖಂಡ ಪ್ರೀತಂ ನಾಗಪ್ಪ, ಯುವ ಮುಖಂಡ ನವನೀತ್ ಗೌಡ ಒಕ್ಕಲಿಗ ಸಮುದಾಯ ಮುಖಂಡರುಗಳಾದ ಕಾಮಗೆರೆ ನಾಗರಾಜು, ಮಾದೇಶ್ , ಎಲ್ ರಾಜೇಂದ್ರ, ಕೃಷ್ಣ, ವೆಂಕಟೇಗೌಡ ನಾಗೇಂದ್ರ,ಮಂಜೇಶ್,ತೆಳ್ಳನೂರು ವಿಜಯ್, ಕೆಂಪೇಗೌಡ ಯುವಕ ಸಂಘದ ಸದಸ್ಯರುಗಳು ಹಾಗೂ ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.

andolana

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago