ಜಿಲ್ಲೆಗಳು

ಸರ್ಕಾರಿ ಗೌರವದೊಂದಿಗೆ ಯೋಧ ಕೆ.ಕೆ. ಶಿಜು ರವರ ಅಂತ್ಯಕ್ರಿಯೆ

ಮಡಿಕೇರಿ: ಅನಾರೋಗ್ಯದಿಂದ ನಿಧನರಾದ ಜಾರ್ಖಂಡ್‌ನ ರಾಂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ ಯೋಧ ಕೆ.ಕೆ. ಶಿಜು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅರೆಸೇನಾ ಪಡೆ ಯೋಧ ಕೆ.ಕೆ. ಶಿಜು (೪೮) ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಹೃದಯಾಘಾತದಿಂದ ರಾಂಚಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮೃತದೇಹ ತಂದು ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಕೊಡಗು ಜಿಲ್ಲೆಯ ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುರ್ಕರಟ್ಟಿಗೆ ತರಲಾಯಿತು.
ಕಡಗದಾಳು ಸರ್ಕಾರಿ ವಿದ್ಯಾಸಂಸ್ಥೆ ಮುಂಭಾಗದಿಂದ ಮೃತದೇಹವನ್ನು ತೆರೆದ ವಾಹನದಲ್ಲಿರಿಸಿ ಗೌರವ ಸಲ್ಲಿಸಲಾಯಿತು. ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಸಾರ್ವಜನಿಕರು ರಸ್ತೆಯ ಎರಡು ಬದಿಯಲ್ಲಿ ಸಾಲಾಗಿ ನಿಂತು ಪುಷ್ಪಾರ್ಚನೆ ಮಾಡುವುದರೊಂದಿಗೆ ಗೌರವ ಸಲ್ಲಿಸಿದರು.
ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಐಎಸ್‌ಎಫ್ ಯೋಧರು ಪುಷ್ಪಗುಚ್ಚ ಇಟ್ಟು, ಸಹದ್ಯೋಗಿಗೆ ಗೌರವ ಸಲ್ಲಿಸಿದರು. ಪೊಲೀಸ್ ತಂಡ ಮೂರು ಸುತ್ತು ಗಾಳಿ ಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಶಾಸಕ ಕೆ.ಜಿ. ಬೋಪಯ್ಯ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಮಹೇಶ್ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಸಾರ್ವಜನಿಕರು, ಕುಟುಂಬಸ್ಥರು ಅಂತಿಮ ದರ್ಶನ ಪಡೆದ ಬಳಿಕ ಕತ್ತಲೆಕಾಡು ಹಿಂದೂ ರುಧ್ರಭೂಮಿಯಲ್ಲಿ ಮಲಯಾಳಿ ವಿಧಿ ವಿಧಾನ ದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

35 mins ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

5 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

5 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

6 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

7 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

7 hours ago