ಮಡಿಕೇರಿ: 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಹಿತ್ಯ ಸಮ್ಮೇಳನ ಜ.28ರಂದು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಬೆಟ್ಟಗೇರಿ ಗ್ರಾಪಂ ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ನೆರವೇರಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ್ ಕಾಮತ್ ನೆರವೇರಿಸಿದರೆ, ಕನ್ನಡ ಧ್ವಜಾರೋಹಣವನ್ನು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ನೆರವೇರಿಸುವರು.
8.30 ಗಂಟೆಗೆ ಗಣ್ಯರ ನೆನಪಿನ ದ್ವಾರಗಳ ಉದ್ಘಾಟನೆ ನಡೆಯಲಿದೆ. ಹೊಸೂರು ಜೋಯಪ್ಪ ನೆನಪಿನ ದ್ವಾರವನ್ನು ಡಿಸಿಸಿ ಬ್ಯಾಂಕ್ ನಿವೃತ್ತ ಸಹಾಯಕ ವ್ಯವಸ್ಥಾಪಕ ತೋರೆರ ಎಂ.ಮುದ್ದಯ್ಯ, ಕೆ.ಸಿ.ರಾಮಮೂರ್ತಿ ಮತ್ತು ಚೌರೀರ ಎಂ.ಪೆಮ್ಮಯ್ಯ ನೆನಪಿನ ದ್ವಾರವನ್ನು ಸಾಹಿತಿ ಬೈತಡ್ಕ ಜಾನಕಿ ಬೆಳ್ಳಿಯಪ್ಪ, ಸ್ವಾತಂತ್ರ್ತ್ಯ ಹೋರಾಟಗಾರರ ಹುತಾತ್ಮ ಸುಬೇದಾರ್ ಗುಡ್ಡಮನೆ ಅಪ್ಪಯ್ಯಗೌಡ ನೆನಪಿನ ದ್ವಾರವನ್ನು ಉದಯ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ಉದ್ಘಾಟಿಸುವರು ಎಂದು ತಿಳಿಸಿದರು.
ಬೆಳಿಗ್ಗೆ 9.15ಕ್ಕೆ ಬೆಟ್ಟಗೇರಿ- ನಾಪೋಕ್ಲು ಕೂಡುರಸ್ತೆಯಿಂದ ಸಮ್ಮೇಳನಾಧ್ಯಕ್ಷರಾದ ತಂಬಂಡ ಡಾ.ವಿಜಯ್ ಪೂಣಚ್ಚರನ್ನು ಮೆರವಣಿಗೆ ಮೂಲಕ ಕರೆತರಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ನೆರವೇರಿಸುವರು ಎಂದು ಮಾಹಿತಿ ನೀಡಿದರು.
ಬೆಳಿಗ್ಗೆ 10.30 ಗಂಟೆಗೆ ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚರ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯರವರು ನೆರವೇರಿಸುವರು. ಮಡಿಕೇರಿ ಶಾಸಕರ ಎಂ.ಪಿ.ಅಪ್ಪಚ್ಚು ರಂಜನ್, ಎಂಎಲ್‌ಸಿ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭ: ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ವಹಿಸುವರು. ಸಾಹಿತಿ ಕೆ.ಆರ್.ಗಂಗಾಧರ ಗೌಡ, ಕಸಾಪ ಅಧ್ಯಕ್ಷ ಎಂ.ಪಿ.ಕೇಶವ್ ಕಾಮತ್, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಕಸಾಪ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹಮದ್, ರೇವರಿ ರಮೇಶ್, ಕೆ.ಯು.ರಂಜಿತ್, ಕಡ್ಲೇರ ತುಳಸಿ ಮೋಹನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…