ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆ ಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.
*ಧೈರ್ಯ ಮಾಡಲಿಲ್ಲ*
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.
*ಗೊಂದಲ ಇಲ್ಲ*
ಎಸ್.ಸಿ/ ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…