Mysore
30
few clouds

Social Media

ಸೋಮವಾರ, 11 ಮೇ 2026
Light
Dark

ಮಹಾರಾಷ್ಟ್ರ ಸಿಎಂ ವಿರುದ್ಧ ಪ್ರತಿಭಟನೆ

 ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ   ಸೇರಬೇಕೆಂಬ ಹೇಳಿಕೆಗೆ ಖಂಡನೆ

ಚಾಮರಾಜನಗರ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಕೆಲವು ಪ್ರದೇಶಗಳು ಮಹಾರಾಷ್ಟçಕ್ಕೆ ಸೇರಬೇಕು ಎಂದು ಹೇಳಿಕೆ ನೀಡಿರುವ ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ
ತೆರಳಿದ ಕಾರ್ಯಕರ್ತರು, ಮಹಾರಾಷ್ಟ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಏಕನಾಥ್ ಶಿಂಧೆ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಸರ್ಕಾರ ಪದೇ ಪದೆ ಗಡಿಕ್ಯಾತೆ ತೆಗೆಯುತ್ತಿದೆ. ಕಳೆದ ೨-೩ ದಿನಗಳಿಂದ ಏಕನಾಥ್ ಶಿಂಧೆ ಅವರು ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುತ್ತೇವೆ ಎಂದು ಉದ್ದಟತನದ ಹೇಳಿಕೆ ನೀಡಿದ್ದಾರೆ. ಈ ಮೂಲಕ ೨ ರಾಜ್ಯಗಳ ನಡುವೆ ಸಂಘರ್ಷವನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಕರ್ನಾಟಕದ ಸೊಲ್ಲಾಪುರ, ಸಾಂಗ್ಲಿ ಸೇರಿದಂತೆ ಇತರೆ ಅಚ್ಚ ಕನ್ನಡ ಮಾತಾಡುವ ಪ್ರದೇಶಗಳು ಮಹಾರಾಷ್ಟçದಲ್ಲಿವೆ. ನಾವು ಇವುಗಳನ್ನು ಕರ್ನಾಟಕಕ್ಕೆ ಬಿಟ್ಟುಕೊಡಿ ಎಂಬ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾರಾಷ್ಟç ಸರಕಾರ ಗಡಿಕ್ಯಾತೆ ತೆಗೆಯುತ್ತಿದ್ದರೂ, ರಾಜ್ಯದ ಸಂಸದರು ಮೌನ ವಹಿಸಿದ್ದಾರೆ.
ಕೂಡಲೇ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳುವ ವಿಚಾರದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಚಳವಳಿ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!