ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪುತ್ಥಳಿ ಬಳಿ ಜಮಾವಣೆಗೊಂಡ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಎಂಇಎಸ್ ಪುಂಡರು ಹಲವು ಕಡೆ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಿ, ಮಸಿ ಬಳಿದು ದಬ್ಬಾಳಿಕೆ ನಡೆಸುತ್ತಿರುವುದು ಖಂಡನೀಯ ಅಂತಹವರ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ಘಟನೆಯಿಂದ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರು ಆತಂಕಕ್ಕೊಳಗಾಗಿದ್ದಾರೆ. ಅಲ್ಲಿನ ಕನ್ನಡಿಗರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು. ಮಹಾಜನ್ ವರದಿಯೇ ಅಂತಿಮ ಎಂಬುದನ್ನು ಮಹಾರಾಷ್ಟ್ರ ಅರಿತುಕೊಳ್ಳಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರವೀಣ್ ಕುಮಾರ್, ಜಿ.ಲೋಕೇಶ್ ಕುಮಾರ್, ಹೇಮಂತ್ ಗೌಡ, ರಘು, ಗಣೇಶ್, ಸುನಂದ್, ಲಾಲು, ಅಸ್ಲಂ, ಮಂಜುನಾಥ, ಶಿವರಾಜು ಇತರರಿದ್ದರು.
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…