ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು.
ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ-ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಸರ್ಕಾರ ಎಸ್ಟಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಶ್ರೀ ಪ್ರಸನ್ನಂದಪುರಿ ಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 241 ದಿನಗಳ ಅನಿರ್ದಿಷ್ಟಾವಧಿ ಧರಣಿ ನಡೆಸಿದ ಪ್ರಯತ್ನಕ್ಕೆ ನ್ಯಾಯ ದೊರಕಿದೆ. ಅವರಿಗೆ ನಾನು ನಮನಗಳನ್ನು ಸಲ್ಲಿಸುತ್ತೇನೆ. ರಾಜ್ಯ ಸರ್ಕಾರ ಶೀಘ್ರದಲ್ಲೇ ಅಸೆಂಬ್ಲಿಯಲ್ಲಿ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟು ಮೀಸಲಾತಿ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳು, ತಹಸಿಲ್ದಾರ್ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಪ ಪಂ ಮುಖ್ಯಾಧಿಕಾರಿ ಪರಶಿವಯ್ಯ, ದೈಹಿಕ ಪರಿವೀಕ್ಷಕ ಮಹದೇವ್,ಆರ್ ಎಫ್ ಒ ಪ್ರವೀಣ್,ಲೋಕ ಲೋಕೋಪಯೋಗಿ ಕಿರಿಯ ಅಭಿಯಂತರ ಸತೀಶ್,ಶಿರಸ್ತೇದಾರ್ ನಾಗೇಂದ್ರ, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ನಾಯಕ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು, ಯಜಮಾನರುಗಳು ಉಪಸ್ಥಿತರಿದ್ದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…