ಅಧಿಕೃತ ದಾಖಲೆ ಸಲ್ಲಿಸಲು ದೂರುದಾರರಿಗೆ ನ್ಯಾಯಾಲಯ ಸೂಚನೆ
ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆ ಪೂಜೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್ ನಿರಾಕರಿಸಿದೆ.ದಸರಾ ಹಬ್ಬದ ವೇಳೆ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೂಜೆಗೆ ಅವಕಾಶ ನಿರಾಕರಿಸಿದ್ದು,
ಈ ಸಂಬಂಧ ಹೆಚ್ಚಿನ ವಿವರಣೆಗಾಗಿಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ತುರ್ತು ನೋಟಿಸ್ ನೀಡಿದೆ.
ಮೈಸೂರಿನ ಅಶೋಕಪುರಂನ ವಕೀಲ ಪಿ.ಚಂದ್ರಶೇಖರ್ ಸಲ್ಲಿಸಿದ್ದ ಅವರು ಪೂಜೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.
ಅಲ್ಲದೇ ಮಹಿಷಾಸುರನ ಪ್ರತಿಮೆಗೆ ಅಗ್ರಪೂಜೆ ಸಲ್ಲಿಸಲು ಅಡ್ಡಿಪಡಿಸಲಾಗುತ್ತಿದೆ. ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಮೈಸೂರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.
ಅರ್ಜಿದಾರರ ಮಧ್ಯಂತರ ಮನವಿಯನ್ನು ಸಾರಾಸಗಟಾಗಿ ಹೈಕೋರ್ಟ್ ತಳ್ಳಿ ಹಾಕಿದೆ.
ಮಹಿಷ ಪ್ರತಿಮೆಗೆ ಪೂಜೆ ಮಾಡಿದ ನಂತರ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಗ್ಗೆ ಯಾವುದಾದರೂ ವಿವರಗಳಿದ್ದರೆ ಸಲ್ಲಿಸಲು ಪೀಠ ಸೂಚನೆ ನೀಡಿತು. ಜತೆಗೆ ಅಧಿಕೃತ ಮತ್ತು ಪರಿಗಣನಾರ್ಹ ವಿವರಗಳು ಲಭ್ಯವಿದ್ದರೆ ಅವುಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ಎಂದು ಅರ್ಜಿದಾರರ ಪರ ವಕೀಲ ಅಬೂಬಕರ್ ಶಫಿ ಅವರಿಗೆ ಸೂಚನೆ ನೀಡಿತು.
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…