ಜಿಲ್ಲೆಗಳು

ಮೈಷುಗರ್: ಬೆಳೆಗಾರರಿಗೆ 21 ಕೋಟಿ ರೂ. ಪಾವತಿ

ಮಂಡ್ಯ ಜಿಲ್ಲೆ 180 ಕೆರೆ ತುಂಬಿಸಲು 454 ಕೋಟಿ ರೂ. ಸದ್ಯವೇ ಬಿಡುಗಡೆ: ಸಿಎಂ

ಪಾಂಡವಪುರ: ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಂಡ್ಯ ಜಿಲ್ಲೆಗೆ ಎಥನಾಲ್ ಪ್ಲಾಂಟ್ ಸ್ಥಾಪಿಸಿ, ಈ ಭಾಗದ ರೈತರ ಕಬ್ಬನ್ನು ಅರೆಸುವ ಕಾರ್ಯವನ್ನು ಮಾಡಲಾಗುವುದು. ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಯಲ್ಲಿ ಮಂಡ್ಯ ಜಿಲ್ಲೆಯ ಕಬ್ಬನ್ನು ಅರೆಸುವ ವ್ಯವಸ್ಥೆಯನ್ನು ಮಾಡಲಾಗಿದೆ
ವಿ.ಸಿ.ನಾಲೆಯ ನಿರ್ಮಾಣವನ್ನು ೩೩೦ ಕೋಟಿ ರೂ.ಗಳ ವೆಚ್ಚದಲ್ಲಿ ನಮ್ಮ ಸರ್ಕಾರ ಪೂರ್ಣಗೊಳಿಸಿದೆ. ರೈತರ ಹೊಲಕ್ಕೆ ನೀರು ತಲುಪಿಸುವ ಸಂಕಲ್ಪದೊಂದಿಗೆ , ವಿ.ಸಿ.ನಾಲೆ ಹೆಬ್ಬಗೋಡಿ ಆಧುನೀಕರಣಕ್ಕೆ ೬೦೬ ಕೋಟಿ ರೂ.ಗಳನ್ನು ಮಂಜೂರಾತಿಯನ್ನು ನೀಡಲಾಗುವುದು. ಮಂಡ್ಯ ಜಿಲ್ಲೆಯ ೧೮೦ ಕೆರೆಗಳನ್ನು ತುಂಬಿಸುವ ೪೫೪ ಕೋಟಿ ರೂ.ಗಳ ಅನುದಾನವನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು. ರೈತರ ಸಬಲೀಕರಣ, ಔದ್ಯೋಗಿಕರಣ ಆಗುವುದು ಬಿಜೆಪಿ ಸಂಕಲ್ಪ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆ.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಡಾ.ಇಂದ್ರೇಶ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ ಉಮೇಶ್ ಇತರರು ಉಪಸ್ಥಿತರಿದ್ದರು.

‘ಮದ್ದೂರು ನಾಲೆಗಳ ಆಧುನೀಕರಣಕ್ಕೆ 330 ಕೋಟಿ ರೂ.’
ಮದ್ದೂರಿನ ಕೊನೆ ಭಾಗದವರೆಗೂ ಕಾವೇರಿ ನೀರನ್ನು ತರಲು ೩೩೦ ಕೋಟಿ ರೂ. ವೆಚ್ಚದಲ್ಲಿ ನಾಲಾ ಆಧುನೀಕರಣಕ್ಕೆ ಮುಂದಾಗಿದ್ದು, ಇದರಿಂದಾಗಿ ಕೊನೆ ಭಾಗದವರೆಗೂ ನೀರು ಹರಿಸಲಾಗುವುದು. ಇದರಿಂದಾಗಿ ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ ಎಂದು ಮದ್ದೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯದ ಇತಿಹಾಸವನ್ನು ಅವಲೋಕಿಸಿದಾಗ, ಕೇವಲ ಕಾಂಗ್ರೆಸ್ ಮತ್ತು ಜಾ.ದಳ ಅಧಿಕಾರಕ್ಕೆ ಬಂದಿದೆ. ಮಂಡ್ಯ ಜಿಲ್ಲೆಯಲ್ಲಿ ಅಧಿಕಾರ ಹೊಂದಿದ್ದ ಪಕ್ಷಗಳು, ಅಲ್ಲಿನ ಜನರ ಸಂಕಷ್ಟಕ್ಕೆ ಪರಿಹಾರ ನೀಡಲಿಲ್ಲ. ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಸೆಳೆದು, ಮತವನ್ನು ಪಡೆಯಲು ಇನ್ನು ಮುಂದೆ ಸಾಧ್ಯವಿಲ್ಲ. ಆದರೆ ಬಿಜೆಪಿ ಸರ್ಕಾರ ರೈತರ ಶ್ರಮಕ್ಕೆ ಬೆಲೆ ನೀಡಿದೆ. ಮಂಡ್ಯ ಜಿಲ್ಲೆಯ ಜನರ ಆಶೋತ್ತರಗಳನ್ನು ಸಾಕಾರಗೊಳಿಸುವ ಸರ್ಕಾರ ನಮ್ಮದಾಗಿದೆ.
ಬಸವರಾಜ ಬೊಮ್ಮಾಯಿ, ಸಿಎಂ

ಸಿಎಂಗೆ ರೈತಸಂಘ ಕಪ್ಪು ಬಾವುಟ ಪ್ರದರ್ಶನ
ಸಿಎಂಗೆ ರೈತಸಂಘ ಕಪ್ಪು ಬಾವುಟ ಪ್ರದರ್ಶನ
ಮದ್ದೂರು ಮತ್ತು ಪಾಂಡವಪುರದಲ್ಲಿ ಕಬ್ಬಿನ ಹಾಗೂ ಹಾಲಿನ ದರ ಏರಿಕೆ ಮಾಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ನೀಡಿದ ಭರವಸೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಆಗಮಿಸಿದ ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದರು.

ನಾಲಾ ಆಧುನೀಕರಣಕ್ಕೆ 330 ಕೋಟಿ’
ಮದ್ದೂರಿನ ಕೊನೆ ಭಾಗದವರೆಗೂ ಕಾವೇರಿ ನೀರನ್ನು ತರಲು ೩೩೦ ಕೋಟಿ ರೂ. ವೆಚ್ಚದಲ್ಲಿ ನಾಲಾ ಆಧುನೀಕರಣಕ್ಕೆ ಮುಂದಾಗಿದ್ದು, ಇದರಿಂದಾಗಿ ಕೊನೆ ಭಾಗದವರೆಗೂ ನೀರು ಹರಿಸಲಾಗುವುದು. ಇದರಿಂದಾಗಿ ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು, ಮೈಸೂರು ದಶಪಥ ಹೆದ್ದಾರಿಯಿಂದಾಗಿ ಎರಡು ನಗರಗಳ ಪ್ರಯಾಣ ಕೇವಲ ಒಂದೂವರೆ ಗಂಟೆಯಾಗಲಿದ್ದು, ಕೇಂದ್ರದಲ್ಲಿ ಪ್ರಧಾನಿಯಾಗಿದ್ದ ಮನಮೋಹನಸಿಂಗ್ ಹಾಗೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಏಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ಅವರು ಪ್ರಶ್ನಿಸಿದರು.

andolanait

Recent Posts

ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಶಿವರಾಜ್‌ಕುಮಾರ್:‌ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್‌ ಇಂದು(ಡಿ.24) ಅಮೆರಿಕಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅದಷ್ಟು ಬೇಗ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾಗೂ…

17 mins ago

ನಾಳೆ ಕ್ರಿಸ್‌ಮಸ್‌ ಹಬ್ಬದ ಸಂಭ್ರಮ: ಮೈಸೂರಿನ ಸಂತಫಿಲೋಮಿನಾ ಚರ್ಚ್‌ನಲ್ಲಿ ಸಕಲ ಸಿದ್ಧತೆ

ಮೈಸೂರು: ನಾಳಿನ ಕ್ರಿಸ್‌ಮಸ್‌ ಹಬ್ಬದ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನ ಸಂತ ಫಿಲೋಮಿನ ಚರ್ಚ್‌ನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ…

27 mins ago

ಕರ್ನಾಟಕಕ್ಕೂ, ಪೆರಿಯಾರ್‌ಗೂ ಏನು ಸಂಬಂಧ: ಬಿಜೆಪಿ ಟ್ವೀಟ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೆರಿಯಾರ್‌ ರಾಮಸ್ವಾಮಿ ಅವರ ಪುಣ್ಯಸ್ಮರಣೆಯ ನಮನಗಳನ್ನು ಕೋರಿದ್ದಾರೆ. ಈ ಬಗ್ಗೆ…

41 mins ago

ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಎಂಎಲ್‌ಸಿ ಸಿ.ಟಿ.ರವಿ ಆಗ್ರಹ

ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ…

55 mins ago

ಸಿ.ಟಿ.ರವಿ ಕೇಸ್‌ ಬಗ್ಗೆ ಸಿಐಡಿ ತನಿಖೆ: ನಮ್ಮ ವ್ಯಾಪ್ತಿಗೆ ಬರಲ್ಲ-ಬಸವರಾಜ್‌ ಹೊರಟ್ಟಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಕೇಸ್‌ಅನ್ನು ಸಿಐಡಿ ತನಿಖೆಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅದು ನಮ್ಮ…

1 hour ago

ತೊರೆನೂರು ಗ್ರಾಮ ಪಂಚಾಯಿತಿಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಕೊಡಗು: ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿಗೆ ಭೇಟಿ…

1 hour ago