ಜಿಲ್ಲೆಗಳು

ಮೈಷುಗರ್: ಬೆಳೆಗಾರರಿಗೆ 21 ಕೋಟಿ ರೂ. ಪಾವತಿ

ಮಂಡ್ಯ ಜಿಲ್ಲೆ 180 ಕೆರೆ ತುಂಬಿಸಲು 454 ಕೋಟಿ ರೂ. ಸದ್ಯವೇ ಬಿಡುಗಡೆ: ಸಿಎಂ

ಪಾಂಡವಪುರ: ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಂಡ್ಯ ಜಿಲ್ಲೆಗೆ ಎಥನಾಲ್ ಪ್ಲಾಂಟ್ ಸ್ಥಾಪಿಸಿ, ಈ ಭಾಗದ ರೈತರ ಕಬ್ಬನ್ನು ಅರೆಸುವ ಕಾರ್ಯವನ್ನು ಮಾಡಲಾಗುವುದು. ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಯಲ್ಲಿ ಮಂಡ್ಯ ಜಿಲ್ಲೆಯ ಕಬ್ಬನ್ನು ಅರೆಸುವ ವ್ಯವಸ್ಥೆಯನ್ನು ಮಾಡಲಾಗಿದೆ
ವಿ.ಸಿ.ನಾಲೆಯ ನಿರ್ಮಾಣವನ್ನು ೩೩೦ ಕೋಟಿ ರೂ.ಗಳ ವೆಚ್ಚದಲ್ಲಿ ನಮ್ಮ ಸರ್ಕಾರ ಪೂರ್ಣಗೊಳಿಸಿದೆ. ರೈತರ ಹೊಲಕ್ಕೆ ನೀರು ತಲುಪಿಸುವ ಸಂಕಲ್ಪದೊಂದಿಗೆ , ವಿ.ಸಿ.ನಾಲೆ ಹೆಬ್ಬಗೋಡಿ ಆಧುನೀಕರಣಕ್ಕೆ ೬೦೬ ಕೋಟಿ ರೂ.ಗಳನ್ನು ಮಂಜೂರಾತಿಯನ್ನು ನೀಡಲಾಗುವುದು. ಮಂಡ್ಯ ಜಿಲ್ಲೆಯ ೧೮೦ ಕೆರೆಗಳನ್ನು ತುಂಬಿಸುವ ೪೫೪ ಕೋಟಿ ರೂ.ಗಳ ಅನುದಾನವನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು. ರೈತರ ಸಬಲೀಕರಣ, ಔದ್ಯೋಗಿಕರಣ ಆಗುವುದು ಬಿಜೆಪಿ ಸಂಕಲ್ಪ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆ.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಡಾ.ಇಂದ್ರೇಶ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ ಉಮೇಶ್ ಇತರರು ಉಪಸ್ಥಿತರಿದ್ದರು.

‘ಮದ್ದೂರು ನಾಲೆಗಳ ಆಧುನೀಕರಣಕ್ಕೆ 330 ಕೋಟಿ ರೂ.’
ಮದ್ದೂರಿನ ಕೊನೆ ಭಾಗದವರೆಗೂ ಕಾವೇರಿ ನೀರನ್ನು ತರಲು ೩೩೦ ಕೋಟಿ ರೂ. ವೆಚ್ಚದಲ್ಲಿ ನಾಲಾ ಆಧುನೀಕರಣಕ್ಕೆ ಮುಂದಾಗಿದ್ದು, ಇದರಿಂದಾಗಿ ಕೊನೆ ಭಾಗದವರೆಗೂ ನೀರು ಹರಿಸಲಾಗುವುದು. ಇದರಿಂದಾಗಿ ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ ಎಂದು ಮದ್ದೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯದ ಇತಿಹಾಸವನ್ನು ಅವಲೋಕಿಸಿದಾಗ, ಕೇವಲ ಕಾಂಗ್ರೆಸ್ ಮತ್ತು ಜಾ.ದಳ ಅಧಿಕಾರಕ್ಕೆ ಬಂದಿದೆ. ಮಂಡ್ಯ ಜಿಲ್ಲೆಯಲ್ಲಿ ಅಧಿಕಾರ ಹೊಂದಿದ್ದ ಪಕ್ಷಗಳು, ಅಲ್ಲಿನ ಜನರ ಸಂಕಷ್ಟಕ್ಕೆ ಪರಿಹಾರ ನೀಡಲಿಲ್ಲ. ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಸೆಳೆದು, ಮತವನ್ನು ಪಡೆಯಲು ಇನ್ನು ಮುಂದೆ ಸಾಧ್ಯವಿಲ್ಲ. ಆದರೆ ಬಿಜೆಪಿ ಸರ್ಕಾರ ರೈತರ ಶ್ರಮಕ್ಕೆ ಬೆಲೆ ನೀಡಿದೆ. ಮಂಡ್ಯ ಜಿಲ್ಲೆಯ ಜನರ ಆಶೋತ್ತರಗಳನ್ನು ಸಾಕಾರಗೊಳಿಸುವ ಸರ್ಕಾರ ನಮ್ಮದಾಗಿದೆ.
ಬಸವರಾಜ ಬೊಮ್ಮಾಯಿ, ಸಿಎಂ

ಸಿಎಂಗೆ ರೈತಸಂಘ ಕಪ್ಪು ಬಾವುಟ ಪ್ರದರ್ಶನ
ಸಿಎಂಗೆ ರೈತಸಂಘ ಕಪ್ಪು ಬಾವುಟ ಪ್ರದರ್ಶನ
ಮದ್ದೂರು ಮತ್ತು ಪಾಂಡವಪುರದಲ್ಲಿ ಕಬ್ಬಿನ ಹಾಗೂ ಹಾಲಿನ ದರ ಏರಿಕೆ ಮಾಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ನೀಡಿದ ಭರವಸೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಆಗಮಿಸಿದ ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದರು.

ನಾಲಾ ಆಧುನೀಕರಣಕ್ಕೆ 330 ಕೋಟಿ’
ಮದ್ದೂರಿನ ಕೊನೆ ಭಾಗದವರೆಗೂ ಕಾವೇರಿ ನೀರನ್ನು ತರಲು ೩೩೦ ಕೋಟಿ ರೂ. ವೆಚ್ಚದಲ್ಲಿ ನಾಲಾ ಆಧುನೀಕರಣಕ್ಕೆ ಮುಂದಾಗಿದ್ದು, ಇದರಿಂದಾಗಿ ಕೊನೆ ಭಾಗದವರೆಗೂ ನೀರು ಹರಿಸಲಾಗುವುದು. ಇದರಿಂದಾಗಿ ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು, ಮೈಸೂರು ದಶಪಥ ಹೆದ್ದಾರಿಯಿಂದಾಗಿ ಎರಡು ನಗರಗಳ ಪ್ರಯಾಣ ಕೇವಲ ಒಂದೂವರೆ ಗಂಟೆಯಾಗಲಿದ್ದು, ಕೇಂದ್ರದಲ್ಲಿ ಪ್ರಧಾನಿಯಾಗಿದ್ದ ಮನಮೋಹನಸಿಂಗ್ ಹಾಗೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಏಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ಅವರು ಪ್ರಶ್ನಿಸಿದರು.

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

2 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 hours ago