ಜಿಲ್ಲೆಗಳು

ಮಳವಳ್ಳಿ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಡಿಡಿಪಿಐಗೆ ಬಿಇಒ ವರದಿ; ಆರೋಪಿ ಶಿಕ್ಷಕನೇ ಅಲ್ಲ

ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ.

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೇ ಅತ್ಯಾಚಾರ ನಡೆದಿತ್ತು. ಅಲ್ಲದೆ, ಆಕೆಯನ್ನು ಕೊಲೆ ಮಾಡಿ, ನೀರಿನ ಸಂಪ್ ಒಳಗೆ ಹಾಕಿ, ಆರೋಪಿ ವಿಕೃತಿ ಮೆರದಿದ್ದ. ಈ ಘಟನೆಯನ್ನು ಇಡೀ ಕರ್ನಾಟಕದ ಜನತೆ ಖಂಡಿಸುವ ಮೂಲಕ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದರು.
ಘಟನೆ ಬಳಿಕ ಶಿಕ್ಷಣ ಇಲಾಖೆ ಹೈ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯಾದ್ಯಂತ ಇರುವ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿದ್ದಾರೆ. ಅನಧಿಕೃತ ಟ್ಯೂಷನ್ ಕಂಡು ಬಂದರೆ ಅಥವಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಎಚ್ಚರವಹಿಸಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಪ್ರಕರಣ ದಾಖಲಾಗುತ್ತದೆ ಎಂದು ಮಂಡ್ಯದಲ್ಲಿ ಡಿಡಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ಯೂಷನ್‌ಗೆ ತೆರಳಿದ್ದ ಬಾಲಕಿ ಮೇಲೆ ಎರಗಿದ್ದ ಕೀಚಕ ಕಾಂತರಾಜು, ಜ್ಞಾನ ಕುಟೀರ ಟ್ಯೂಷನ್ ಸೆಂಟರ್‌ನಲ್ಲಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಆದರೆ, ಆತ ಶಿಕ್ಷಕನೇ ಅಲ್ಲ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಆತ ಓದಿದ್ದು ಕೇವಲ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ. ಇತ್ತ ಟ್ಯೂಷನ್ ಸೆಂಟರ್‌ಗೂ ಯಾವುದೇ ಅನುಮತಿಯು ಇಲ್ಲ. ಇಂತಹ ಟ್ಯೂಷನ್‌ಗಳ ಮೇಲೆ ಎಚ್ಚರ ವಹಿಸಿ.
-ಜವರೇಗೌಡ, ಡಿಡಿಪಿಐ

andolana

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

58 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

1 hour ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

1 hour ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

2 hours ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago