ಜಿಲ್ಲೆಗಳು

ಮಳವಳ್ಳಿಯ ಅತ್ಯಾಚಾರ, ಕೊಲೆ ಪ್ರಕರಣ : ಮೈಸೂರು ವಿವಿ ಸಂಘದಿಂದ ಬಾಲಕಿಗೆ ಶ್ರದ್ಧಾಂಜಲಿ ಸಭೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ  ಅತ್ಯಾಚಾರಕ್ಕೆ ಬಲಿಯಾದ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೂಸ್ಲೆ ಅವರು 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇವೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿಯಾಗುತ್ತೇವೆ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೋಸ್ಲೆ,ಅಧ್ಯಕ್ಷರಾದ ನಟರಾಜ್ ಶಿವಣ್ಣ ,ಉಪಾಧ್ಯಕ್ಷರಾದ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ,ರಾಘವೇಂದ್ರ ,ನಂಜುಂಡಸ್ವಾಮಿ, ಪ್ರವೀಣ್,ರಂಗನಾಥ್,ನಾಗಮಲ್ಲು,ಮುತ್ತುರಾಜ್,ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

andolanait

Recent Posts

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

5 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

10 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

11 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

12 hours ago