ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟ : ಮುಡಿ ತೆಗೆಯಲು ಹೆಚ್ಚಿನ ಹಣ ವಸೂಲಿ – ಭಕ್ತರ ಆರೋಪ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ ಮಾಡಿಸಲು 50ರೂ ಟಿಕೆಟ್ ಮಾತ್ರ ಪಡೆಯಬೇಕೆಂದು ನಾಮಫಲಕದಲ್ಲಿದೆ. ಟಿಕೆಟ್ ಪಡೆದುಕೊಂಡು ಮುಡಿ ಮಾಡಿಸಲು ಹೋಗುವ ಭಕ್ತರನ್ನು ಮುಡಿ ಮಾಡುವವರು ಮೊದಲೇ ಇಂತಿಷ್ಟು ಹಣ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರಿಗೆ ಧಮಕಿಯನ್ನು ಹಾಕಿ ಎದುರಿಸುತ್ತಿದ್ದಾರೆ, ಹಣ ನೀಡದಿದ್ದರೆ ಮುಡಿಯನ್ನು ಸರಿಯಾಗಿ ಮಾಡದೆ ಯದ್ವ ತದ್ವ ರಕ್ತ ಬರುವ ರೀತಿ ಮುಡಿ ಮಾಡುತ್ತಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಿಲ್ ಕುಮಾರ್ ಎಂಬುವರು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಟಿ ಕೋಟಿ ಆದಾಯ ಬಂದ್ರು ನಮ್ಮ ಕೂದಲು ಕೊಡಕ್ಕೆ ದುಡ್ಡು ಕೊಡಬೇಕು ಇನ್ನು ಇವರೆಲ್ಲ ಹೇಗೆ ಅಭಿವೃದ್ಧಿ ಮಾಡುತ್ತಾರೆ. ಶ್ರೀ ಕ್ಷೇತ್ರದಲ್ಲಿ ನಿಮ್ಮಿಂದ ಭಕ್ತರಿಗೆ ಯಾವುದಾದರೂ ಒಂದು ಉಚಿತ ಸೇವೆ ಅಂತ ಏನಾದರೂ ಇದ್ದರೆ ಹೇಳಿ ನಾಚಿಕೆ ಆಗಬೇಕು ನಿಮಗೆ ದೇವರ ಹೆಸರಲ್ಲಿ ದುಡ್ಡು ಮಾಡುತ್ತಿರುವ ನಿಮಗೆ ದೇವರೇ ಬುದ್ಧಿ ಕಲಿಸುತ್ತಾನೆ ನೋಡಿರಿ ಎಂದು ಪೋಸ್ಟ್ ಮಾಡಿದ್ದಾರೆ.


ಮುಡಿ ಮಾಡಲು ಟಿಕೆಟ್ ಮಾತ್ರ ಪಡೆಯಬೇಕು ಹೆಚ್ಚಿನ ಹಣ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಈ ಕೂಡಲೇ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಸೂಚನೆ ನೀಡುತ್ತೇನೆ.

ಕಾತ್ಯಾಯಿನಿ ದೇವಿ

ಕಾರ್ಯದರ್ಶಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

8 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

9 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

9 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

10 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

10 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

10 hours ago