ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.50 ಕೋಟಿ ರೂ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 9 ಗಂಟೆಯ ವರೆಗೂ ನಡೆಯಿತು.
ಈ ಬಾರಿ ಮಹಾನವಮಿ ಆಯುಧಪೂಜೆ, ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಸೇರಿದಂತೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 36 ದಿನಗಳ ಅವಧಿಯಲ್ಲಿ 2 ಕೋಟಿ 50ಲಕ್ಷದ 85ಸಾವಿರದ 794 ರೂ 122 ಗ್ರಾಂ ಚಿನ್ನ ಹಾಗೂ 2.710 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು,ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಸಿಬ್ಬಂದಿಗಳಾದ ಜನಾರ್ದನ್, ಮಲ್ಲಿಕಾರ್ಜುನಪ್ಪ, ನಾಗರಾಜು, ಮಾದೇಶ್ , ಎಸ್ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ವೃತ್ತ ನಿರೀಕ್ಷಕ ಬಸವರಾಜು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…