ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಭಕ್ತರು ಬಿಸಾಡಿದ್ದ ಸುಮಾರು ಎರಡು ಟ್ರಾಕ್ಟರ್ ರಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಮೈಸೂರು ವಿಭಾಗದ ಸಂಚಾಲಕ ಚಂದ್ರಶೇಖರ್ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪ್ರತಿಯೊಬ್ಬರು ಪರಿಸರ ರಕ್ಷಣೆ ಮಾಡಲು ಪಣತೊಡಬೇಕು. ಅರಣ್ಯದಲ್ಲಿ ಭಕ್ತರು ಬಿಸಾಡುವ ಪ್ಲಾಸ್ಟಿಕ್ ನಿಂದ ವನ್ಯಪ್ರಾಣಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಯವರು ಹತ್ತಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು ಸಹ ಪ್ರಯೋಜನವಾಗಿಲ್ಲ. ಕೇವಲ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎರಡು ಟ್ರ್ಯಾಕ್ಟರ್ ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಮಾಡಲಾಗಿದೆ. ಕೇವಲ ಒಂದು ಕಿಲೋಮೀಟರ್ ನಲ್ಲಿ ಇಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳಿದ್ದರೆ ಇನ್ನು ಶ್ರೀ ಕ್ಷೇತ್ರದ ಸುತ್ತ ಎಷ್ಟು ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಿಗಲಿದೆ ಎಂಬುದು ಪ್ರಶ್ನೆಯಾಗಿದೆ. ಆದ್ದರಿಂದ ಮಲೆ ಮಾದೇಶ್ವರ ಭಕ್ತರು ಅರಣ್ಯಕ್ಕೆ ಪ್ಲಾಸ್ಟಿಕ್ ವಾಟರ್ ಬಾಟಲ್ ಸೇರಿದಂತೆ ಇತರೆ ಪ್ಲಾಸ್ಟಿಕ್ ಆಹಾರ ತಿನಿಸು ಪದಾರ್ಥಗಳನ್ನು ಅರಣ್ಯಕ್ಕೆ ತೆಗೆದುಕೊಂಡು ಹೋಗಿ ಬಿಸಾಡಬಾರದು ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಯುವ ಬ್ರಿಗೇಡ್ ನ ಸದಸ್ಯರುಗಳಾದ ಯೋಗೇಶ್, ಗೋಪಾಲ್, ಪ್ರಜ್ವಲ್, ರವಿ, ಶ್ರೀನಿವಾಸ್, ನಿತಿನ್, ಕೀರ್ತಿ, ಮಹದೇವಸ್ವಾಮಿ, ಮಂಜುನಾಥ್, ಪ್ರಶಾಂತ್, ಪ್ರಮೋದ್,ಚಂದ್ರಶೇಖರ್ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಸ್ವಯಂ ಕಾರ್ಯಕರ್ತರು ಭಾಗಿಯಾಗಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…