ಹನೂರು : ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಮುಂಭಾಗ ಭಕ್ತರು ಹಾಗೂ ಸಾರ್ವಜನಿಕರು ಚಪ್ಪಲಿಗಳನ್ನು ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡಿ ಬೆಟ್ಟ ನಂಜನಗೂಡು ಸೇರಿದಂತೆ ಇನ್ನಿತರ ದೇವಾಲಯಗಳಲ್ಲಿ ಭಕ್ತರು ಚಪ್ಪಲಿ ಬಿಡುವುದಕ್ಕಾಗಿ ಕೌಂಟರ್ ಗಳನ್ನು ತೆಗೆದಿದ್ದಾರೆ. ಅದೇ ರೀತಿ ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಸಮೀಪ ಒಂದು ಚಪ್ಪಲಿ ಕೌಂಟರ್ ಗಳನ್ನು ತೆರೆಯಲಾಗಿದೆ. ಜಾತ್ರಾ ಮಹೋತ್ಸವ ಹಬ್ಬ ಹರಿದಿನಗಳು,ಅಮಾವಾಸ್ಯೆ ಪೂಜೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಬರುವಂತಹ ಭಕ್ತಾದಿಗಳಿಗೆ ಕೇವಲ ಒಂದೇ ಒಂದು ಚಪ್ಪಲಿ ಕೌಂಟರ್ ಇರುವುದರಿಂದ ತೀವ್ರ ತೊಂದರೆ ಆಗುತ್ತಿದೆ ಈ ಹಿನ್ನೆಲೆ ದೇವಾಲಯದ ಆವರಣ ಹಾಗೂ ರಂಗಮಂದಿರದ ಮುಂಭಾಗ ಚಪ್ಪಲಿಗಳನ್ನು ಬಿಡುತ್ತಿರುವುದರಿಂದ ಭಕ್ತರಿಗೆ ಕಿರಿಕಿರಿ ಉಂಟಾಗುತ್ತಿದೆ ಆದ್ದರಿಂದ ಸಂಬಂಧಪಟ್ಟ ಪ್ರಾಧಿಕಾರದ ಅಧಿಕಾರಿಗಳು ಹೆಚ್ಚು ಚಪ್ಪಲಿ ಕೌಂಟರ್ ತೆರೆದು ಅನುಕೂಲ ಕಲ್ಪಿಸಿ ಎಲ್ಲೆಂದರಲ್ಲಿ ಚಪ್ಪಾಲಿ ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…