ಜಿಲ್ಲೆಗಳು

ಮಲೆಮಹದೇಶ್ವರ ಬೆಟ್ಟ ಮುಖ್ಯದ್ವಾರ ರಸ್ತೆ ಅಭಿವೃದ್ಧಿಗೆ ಕ್ರಮ : ಸಚಿವ ಆನಂದ್ ಸಿಂಗ್

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರ ಸಂಪರ್ಕಿಸುವ ರಸ್ತೆ ಕಾಮಗಾರಿಗೆ 2ಕೋಟಿ ಅನುದಾನ ನೀಡಲಾಗಿದೆ ಎಂದು ಪ್ರವಾಸೋದ್ಯಮ,ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಆನಂದ್ ಸಿಂಗ್ ಉತ್ತರಿಸಿದರು.

ಬೆಂಗಳೂರಿನ ವಿಧಾನಸಭೆ ಕಲಾಪದಲ್ಲಿ ಹನೂರು ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಮಲೆ ಮಾದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರಕ್ಕೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ 2ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿರುತ್ತದೆ.ಈ ಕಾಮಗಾರಿಗೆ ಹತ್ತು 3ಇಪ್ಪತ್ತ ರಂದು ಆಡಳಿತಾತ್ಮಕ ಅನುಮೋದನೆ ನೀಡಿ 2ಕೋಟೆಗಳನ್ನು ವ್ಯವಸ್ಥಾಪಕ ನಿರ್ದೇಶಕರು ಕೆಆರ್ ಐಡಿಎಲ್ ಬೆಂಗಳೂರು ರವರಿಗೆ ಬಿಡುಗಡೆ ಮಾಡಲಾಗಿರುತ್ತದೆ ಕಾಮಗಾರಿ ಪ್ರಾರಂಭಿಸಬೇಕಿದೆ ಎಂದು ಉತ್ತರಿಸಿದ್ದಾರೆ. ಇದಲ್ಲದೆ ಹನೂರು ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ, ಹೊಗೇನಕಲ್ ಫಾಲ್ಸ್, ಗೋಪಿನಾಥಮ್, ಪಾಲಾರ್ ಗಡಿ ಹಾಗೂ ಒಡೆಯರಪಾಳ್ಯ ಹೊನ್ನಮೇಟಿ ಅತ್ತಿಖಾನೆ ಸೇರಿದಂತೆ 5 ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು ಇದರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ನಿರ್ವಹಣೆ ಇಲ್ಲದ ಶೌಚಾಲಯ; ಇಲ್ಲಿ ಬಯಲೇ ಮೂತ್ರಾಲಯ

ವಾಣಿವಿಲಾಸ ಮಾರುಕಟ್ಟೆ ಒಳಗಿನ ಶೌಚಾಲಯದ ದುಸ್ಥಿತಿ; ಬಹುತೇಕ ಶೌಚಾಲಯಗಳಲ್ಲೂ ಇದೇ ಸ್ಥಿತಿ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ದೇಶದ…

17 mins ago

ಮುಡಾ: 50:50 ಅನುಪಾತದಡಿ 1950 ಬದಲಿ ನಿವೇಶನ

ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದಲ್ಲಿ ೫೦:೫೦ ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿ ರುವ ಹಗರಣ ಕುರಿತು…

29 mins ago

ಸರ್ಕಾರಿ ಶಾಲೆ ಬಾಲಕಿಯರಿಗೆ ಬಯಲೇ ಶೌಚಾಲಯ!

ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…

2 hours ago

ಕಾಡಿನಿಂದಲೂ ಕಾಣೆಯಾದ ಕಾಡುಪಾಪ

ಬಿ. ಆರ್. ಜೋಯಪ್ಪ ಕೊಡಗಿನಲ್ಲಿ ಸ್ಥಳೀಯರು ‘ಕಾಡುಪಾಪ’ವನ್ನು ‘ಚೀಂಗೆ ಕೋಳಿ’ ಎಂದು ಕರೆಯುತ್ತಾರೆ. ಇದೊಂದು ನಿಶಾಚರಿ, ನಿರುಪದ್ರವಿ ಕಾಡಿನ ಜೀವಿ.…

2 hours ago

ಹಸಿವಿನ ಆಳ ಮತ್ತು ಅನ್ನ ಎಂಬ ದೃಶ್ಯ ಕಾವ್ಯ…..

ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…

2 hours ago

ತುಳು ಸಾಹಿತ್ಯ, ಸಂಸ್ಕೃತಿಗೆ ಕನ್ನಡ ಭಾಷಾ ಮೆರುಗು

ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…

3 hours ago