ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಯುವ ನಾಯಕ ರಾಹುಲ್‍ಗಾಂಧಿ ಪರ ಜೈಕಾರ ಹಾಕಿದರು.
ಯುವ ಮುಖಂಡ ಮಹೇಶ್ ಕುದರ್ ಈ ಸಂದರ್ಭದಲ್ಲಿ ಮಾತನಾಡಿ,ಖರ್ಗೆ ಅವರು ಅಧ್ಯಕ್ಷರಾಗಿಆಯ್ಕೆ
ಯಾಗಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ನಿಷ್ಠಾವಂತ ನಾಯಕರಾದ ಅವರ ನೇತೃತ್ವದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್‍ಗೆ ಹೊಸ ಹುರುಪು ತಂದಿದ್ದು ರಾಜ್ಯದಲ್ಲಿ ಅಧಿಕಾರ ಕಾಂಗ್ರೆಸ್ ಹಿಡಿಯಲಿದೆ. ಯುವಕರಿಗೆ ಖರ್ಗೆ ಸ್ಪೂರ್ತಿ ಯ ಚಿಲುಮೆಯಾಗಿದ್ದಾರೆ ಎಂದರು.
ಮುಖಂಡರಾದ ನಲ್ಲೂರು ಮಹದೇವಸ್ವಾಮಿ( ಮಾಲು), ಸಿ.ಕೆ. ರವಿಕುಮಾರ್, ಚನ್ನಪ್ಪ, ಸಿ.ಶ್ರೀನಿವಾಸ್, ಮಹದೇವಸ್ವಾಮಿ, ಶಿವಸ್ವಾಮಿ, ಮಲೆಯೂರು ಸೋಮಯ್ಯ ಮೊದಲಾದವರು ಇದ್ದರು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…