ಜಿಲ್ಲೆಗಳು

ಚಾ.ನಗರ : ಖರ್ಗೆ ಆಯ್ಕೆಗೆ ಕಾಂಗ್ರೆಸ್ ವಿಜಯೋತ್ಸವ

ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಯುವ ನಾಯಕ ರಾಹುಲ್‍ಗಾಂಧಿ ಪರ ಜೈಕಾರ ಹಾಕಿದರು.
ಯುವ ಮುಖಂಡ ಮಹೇಶ್ ಕುದರ್ ಈ ಸಂದರ್ಭದಲ್ಲಿ ಮಾತನಾಡಿ,ಖರ್ಗೆ ಅವರು ಅಧ್ಯಕ್ಷರಾಗಿಆಯ್ಕೆ
ಯಾಗಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ನಿಷ್ಠಾವಂತ ನಾಯಕರಾದ ಅವರ ನೇತೃತ್ವದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್‍ಗೆ ಹೊಸ ಹುರುಪು ತಂದಿದ್ದು ರಾಜ್ಯದಲ್ಲಿ ಅಧಿಕಾರ ಕಾಂಗ್ರೆಸ್ ಹಿಡಿಯಲಿದೆ. ಯುವಕರಿಗೆ ಖರ್ಗೆ ಸ್ಪೂರ್ತಿ ಯ ಚಿಲುಮೆಯಾಗಿದ್ದಾರೆ ಎಂದರು.
ಮುಖಂಡರಾದ ನಲ್ಲೂರು ಮಹದೇವಸ್ವಾಮಿ( ಮಾಲು), ಸಿ.ಕೆ. ರವಿಕುಮಾರ್, ಚನ್ನಪ್ಪ, ಸಿ.ಶ್ರೀನಿವಾಸ್, ಮಹದೇವಸ್ವಾಮಿ, ಶಿವಸ್ವಾಮಿ, ಮಲೆಯೂರು ಸೋಮಯ್ಯ ಮೊದಲಾದವರು ಇದ್ದರು.

andolanait

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

3 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

4 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

4 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

4 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

4 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

4 hours ago