ಟೋಲ್ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಪ್ಲಾಜಾದಲ್ಲಿ ನಡೆದಿದೆ.
ತಾನು ಸಚಿವ ಡಿಕೆಶಿ ಸಂಬಂಧಿ ,ಟೋಲ್ ಕಟ್ಟಲ್ಲವೆಂದು ಟೋಲ್ ಸಿಬ್ಬಂದಿಗೆ ಅವಾಜ್ ಹಾಕಿರುವ ಬಗ್ಗೆ ಆರೋಪ ಕೇಳಿಬಂದಿದೆ. ಟೋಲ್ ಕಟ್ಟಿ ಮುಂದೆ ಹೋಗುವಂತೆ ತಿಳಿಸಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ.
ಟೋಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಸುಜಾತ ಮೇಲೆ ಪುಡಾತಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ವಿಡಿಯೋ ಟೋಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಕ್ಷಿಯೊಂದಿಗೆ ದೂರು ದಾಖಲಿಸಲು ಮಹಿಳಾ ಸಿಬ್ಬಂದಿ ಮುಂದಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.