2,250 ಕೋಟಿ ವೆಚ್ಚದ ಮೆಗಾ ಹಾಲಿನ ಡೈರಿ ಉದ್ಘಾಟನೆ – ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಉಪಸ್ಥಿತಿ.
ಮಂಡ್ಯ: ಇಲ್ಲಿನ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ 2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೆಗಾ ಡೈರಿಯನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ದೀಪ ಬೆಳಗುವ ಮೂಲಕ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿ ವಹಿಸಿದ್ದರು.
ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಜಿಲ್ಲೆಯ ಡೈರಿಗೆ ಈಗಾಗಲೇ ಹಲವಾರು ಪ್ರಶಂಸೆಗಳು ದೊರೆತಿವೆ. ಈಗ ಮೆಗಾ ಡೈರಿ ಲೋಕಾರ್ಪಣೆಗೊಂಡಿದೆ. ಈ ಡೈರಿ 1 ಲಕ್ಷ ಲೀ. ಹಾಲಿನ ಸಂಗ್ರಹಣೆ ಸಾಮರ್ಥ್ಯ ಹೊಂದಿರುವುದು ಇಲ್ಲಿನ ರೈತರಿಗೆ ಇನ್ನೂ ಅನುಕೂಲವಾಗಲಿದೆ. ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡರು ಮೆಗಾ ಡೈರಿ ಉದ್ಘಾಟನೆಗೆ ಬಂದಿದ್ದಾರೆ. ಬೊಮ್ಮಾಯಿ ಅವರು ಹೆಚ್ಚಿನ ಆಸಕ್ತಿವಹಿಸಿ ಹಾಲು ಉತ್ಪಾದಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.ದೇವೇಗೌಡರ ಕಾಲಿಗೆ ನಮಸ್ಕರಿಸಿದ ಬೊಮ್ಮಾಯಿ : ಮೆಗಾ ಡೈರಿ ಉದ್ಘಾಟನೆ ಸಮಾರಂಭ ಕಾರ್ಯಕ್ರಮಕ್ಕೆ ವೇದಿಕೆಗೆ ಆಗಮಿಸುತ್ತಿದ್ದಂತೆ ದೇವೇಗೌಡರ ಕಾಲಿಗೆ ಬಸವರಾಜ ಬೊಮ್ಮಾಯಿ ನಮಸ್ಕರಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಯಶಸ್ಸು ಕಂಡಿದೆ. ಮನೆಯಲ್ಲಿ ಹಾಲು ಕರೆದು ಹಾಕುವ ಮಹಿಳೆಯರಿಗೆ ಧನ್ಯವಾದಗಳು. ಹಾಲಿಗೆ 5 ರೂ ಪ್ರೊತ್ಸಾಹ ಧನ ಕೊಡ್ತಿದ್ದೇವೆ. ಗೆಜ್ಜಲಗೆರೆಯಲ್ಲಿ 1 ಲಕ್ಷ ಸಾಮರ್ಥ್ಯ ಹೊಂದಿರುವ ಮೆಗಾ ಡೈರಿ ಉದ್ಘಾಟನೆ ಮಾಡಲಾಗಿದೆ. ನರೇಂದ್ರ ಮೋದಿ ಅವರು ಸಹಕಾರ ಮಾಡಿ ದೇಶದಲ್ಲಿ ಶಕ್ತಿ ತುಂಬಿದ್ದಾರೆ. ಬೆಂಗಳೂರಿನ ಮೆಗಾ ಡೈರಿ ಸ್ಥಾಪನೆಗೆ ದೇವೇಗೌಡರೇ ಕಾರಣ. ಎಂದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…