ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಜಿ.ಪಂ. ವ್ಯಾಪ್ತಿಯ ಹಳ್ಳಿಕೆರೆ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಶಿವಲಿಂಗಯ್ಯ (೭೨) ಮೃತಪಟ್ಟ ರೈತನಾಗಿದ್ದು, ಇವರಿಗೆ ಪತ್ನಿ ಸಾವಿತ್ರಮ್ಮ, ಪುತ್ರ ವಿಜಯ್ ಹಾಗೂ ಪುತ್ರಿ ರೇಖಾ ಇದ್ದಾರೆ.
ಮೃತ ಶಿವಲಿಂಗಯ್ಯ ಅವರಿಗೆ ೧.೨ ಎಕರೆ ಜಮೀನಿದ್ದು, ಜೋಳ, ಹುರಳಿ ಇನ್ನಿತರೆ ಬೆಳೆಗಳನ್ನು ಬೆಳೆಯುತ್ತಿದ್ದರು. ಜಮೀನಿನಲ್ಲಿ ಬೇಸಾಯ ಮಾಡಲು ಬ್ಯಾಂಕ್ ಆಫ್ ಬರೋಡಾದಲ್ಲಿ ೧ ಲಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೫೫ ಸಾವಿರ ಹಾಗೂ ೩ ಲಕ್ಷಕ್ಕೂ ಅಧಿಕ ಕೈಸಾಲ ಮಾಡಿರುವುದಾಗಿ ತಿಳಿದುಬಂದಿದೆ.
ಸಾಲಕ್ಕೆ ಹೆದರಿದ ಶಿವಲಿಂಗಯ್ಯ ಡಿ.೧೯ರ ಸೋಮವಾರ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬoಧ ಮೃತನ ಪುತ್ರ ವಿಜಯ್ ನೀಡಿದ ದೂರಿನ ಮೇರೆಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…