ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು.
ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಂತರ ಜನತಾ ಪಕ್ಷ ಸೇರ್ಪಡೆಯಾಗಿದ್ದರು. 1998ರಿಂದ 2004ರವರೆಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಜನತಾ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಯಾಗಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾಗಿಯೂ ದುಡಿದಿದ್ದರು.
2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2012ರವರೆಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಇಂಡುವಾಳು ಗ್ರಾಮದ ಜಮೀನಿನಲ್ಲಿ ಬುಧವಾರ ಅವರ ಅಂತ್ಯಕ್ರಿಯೆ ನೆರವೇರಿತು.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…