Mysore
25
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

ಮಂಡ್ಯದ ಆರೋಗ್ಯ ಇಲಾಖೆ ಅಧಿಕಾರಿ ಆತ್ಮಹತ್ಯೆ; ಬೆಂಗಳೂರಿನಲ್ಲಿ ನೇಣಿಗೆ ಶರಣು

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್‌ ಎಂಬುವವರು ಇಂದು ( ಡಿಸೆಂಬರ್‌ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್‌ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ.

ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಹಿಂದೆ ಹೃದಯಾಘಾತಕ್ಕೊಳಗಾಗಿದ್ದ ನಟರಾಜ್‌ ಚಿಕಿತ್ಸೆ ಹಾಗೂ ವಿಶ್ರಾಂತಿಗೆಂದು ರಜೆಯನ್ನು ತೆಗೆದುಕೊಂಡರು. ರಜಾ ಅವಧಿ ಪೂರ್ಣಗೊಂಡ ಕಾರಣ ಇಂದು ಡ್ಯೂಟಿ ರಿಪೋರ್ಟ್‌ ಮಾಡಿಕೊಳ್ಳಲು ನಟರಾಜ್‌ ತೆರಳಿದ್ದರು.

ಆದರೆ ಮಂಡ್ಯದ ಡಿಎಚ್‌ಒ ಡ್ಯೂಟಿ ರಿಪೋರ್ಟ್‌ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಇದರಿಂದ ಬೇಸತ್ತ ನಟರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!