ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಎಂಬುವವರು ಇಂದು ( ಡಿಸೆಂಬರ್ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ.
ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಹಿಂದೆ ಹೃದಯಾಘಾತಕ್ಕೊಳಗಾಗಿದ್ದ ನಟರಾಜ್ ಚಿಕಿತ್ಸೆ ಹಾಗೂ ವಿಶ್ರಾಂತಿಗೆಂದು ರಜೆಯನ್ನು ತೆಗೆದುಕೊಂಡರು. ರಜಾ ಅವಧಿ ಪೂರ್ಣಗೊಂಡ ಕಾರಣ ಇಂದು ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ನಟರಾಜ್ ತೆರಳಿದ್ದರು.
ಆದರೆ ಮಂಡ್ಯದ ಡಿಎಚ್‌ಒ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಇದರಿಂದ ಬೇಸತ್ತ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…