ಜಿಲ್ಲೆಗಳು

ಜಾನಪದ ಪ್ರಕಾರಗಳ ಕಣ್ತುಂಬಿಕೊಂಡ ಜನರು

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.


ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನಡೆದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದಲ್ಲಿ ನಗರದ ವಿವಿಧ ಬೀದಿಗಳಲ್ಲಿ ನಡೆದ ಜನಪದರ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರದರ್ಶನ ,ಮಾಡುತ್ತಾ ಬೆಂಗಳೂರು-ಮೈಸೂರು ಹೆದ್ದಾರಿ, ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತ, ನೂರಡಿ ರಸ್ತೆಯ ಮೂಲಕ ವೇದಿಕೆಗೆ ಆಗಮಿಸಿದರು.

ಜನಪದ ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್‌ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು, ವೀರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರು ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಮುದ ನೀಡಿದವು.
ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಅನುರಣಿಸಿದವು. ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೇ ಸೃಷ್ಟಿಸಿದವು.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

6 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

6 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

7 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

7 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

7 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

7 hours ago