ಜಿಲ್ಲೆಗಳು

ಮಂಡ್ಯ ಕೆ. ಆರ್‌ ಪೇಟೆಯಲ್ಲಿ ಕುಂಭಮೇಳ ಸಂಭ್ರಮ

ಅ.13ರಿಂದ 16ರವರೆಗೆ ಮಲೆ ಮಹದೇಶ್ವರರ ಮಹಾ ಕುಂಭಮೇಳ, ಪುಣ್ಯ ಸ್ನಾನ

ಮೈಸೂರು: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ಅ.13ರಿಂದ 16ರವರೆಗೆ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ಮತ್ತು ಪುಣ್ಯ ಸ್ನಾನ ನೆರವೇರಲಿದ್ದು, ಮಂಡ್ಯ ಜಿಲ್ಲಾಡಳಿತ ಅಗತ್ಯ ಸಿದ್ಧತೆ ವಾಡಿಕೊಂಡಿದೆ ಎಂದು ಉಸ್ತುವಾರಿ ಸಚಿವ ಗೋಪಾಲಯ್ಯ ಮತ್ತು ರೇಷ್ಮೆ ಸಚಿವ ಸಿ.ನಾರಾಯಣಗೌಡ ತಿಳಿಸಿದರು.
ನಗರದ ಸುತ್ತೂರು ಶಾಖಾ ಮಠದ ಆವರಣದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ, ಹೇಮಾವತಿ ಮತ್ತು ಲಕ್ಷ್ಮಣತೀರ್ಥ ನದಿಗಳ ಸಂಗಮ ಸ್ಥಳವಾದ ಅಂಬಿಗರಹಳ್ಳಿಯಲ್ಲಿ ಒಂಬತ್ತು ವರ್ಷಗಳ ಹಿಂದೆ ಕುಂಭಮೇಳ ನಡೆದಿತ್ತು. ಈ ಬಾರಿ ಅಗತ್ಯ ಸಿದ್ಧತೆಗಳೊಂದಿಗೆ ಅದ್ಧೂರಿಯಾಗಿ ಆಯೋಜಿಸಿದ್ದು, ಸುಮಾರು 6ರಿಂದ 7 ಲಕ್ಷ ಜನರು ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಈಗಾಗಲೇ ಮಹದೇಶ್ವರ ಬೆಟ್ಟ, ಮೈಸೂರು ಮತ್ತು ಕೆ.ಆರ್.ಪೇಟೆ ತಾಲ್ಲೂಕಿನಿಂದ ಶ್ರೀ ಮಹದೇಶ್ವರರ ಮೂರು ಜ್ಯೋತಿ ರಥ ಯಾತ್ರೆಗೆ ಚಾಲನೆ ನೀಡಲಾಗಿತ್ತು. ಈ ಯಾತ್ರೆ ಕೆ.ಆರ್.ಪೇಟೆ ತಲುಪಿದ್ದು, ಅ.12ರಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಮೆರವಣಿಗೆ ಮೂಲಕ ಜಾನಪದ ಕಲಾ ತಂಡದೊಡನೆ ಸಂಗಮ ಸ್ಥಳ ತಲುಪಲಿದೆ. ಮೆರವಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಲಿದ್ದಾರೆ ಎಂದು ಅವರು ವಿವರಿಸಿದರು.

ಅಂದು ಸಂಜೆ 6 ಗಂಟೆಗೆ ಮಂಡ್ಯ ಜಿಲ್ಲಾ ಉತ್ಸವ

ಕಾರ್ಯುಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುವಾರ್ ಉದ್ಘಾಟಿಸುವರು. ಅತಿಥಿಯಾಗಿ ಸಂಸದರಾದ ಸುಮಲತಾ ಅಂಬರೀಷ್, ಶಾಸಕರಾದ ಡಿ.ಸಿ.ತಮ್ಮಣ್ಣ, ಮರಿತಿಬ್ಬೇಗೌಡ, ಸಿ.ಎಸ್.ಪುಟ್ಟರಾಜು, ಸುರೇಶ್‌ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಪ್ರೀತಮ್ ಜೆ.ಗೌಡ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.


ಅ.14ರಂದು ಬೆಳಿಗ್ಗೆ 11ಕ್ಕೆ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠದ ಶಿವಾನಂದಾಪುರಿ ಸ್ವಾಮೀಜಿ, ಬೇಬಿ ಮಠದ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಮತ್ತು ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಕೆ. ಗೋಪಾಲಯ್ಯ, ವಿ.ಸೋಮಣ್ಣ, ಡಾ.ಸಿ.ಎನ್.ಅಶ್ವಥ ನಾರಾಯಣ್, ಶಶಿಕಲಾ ಜೊಲ್ಲೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಮೊದಲಾದವರು ಪಾಲ್ಗೊಳ್ಳುವರು.
ಅ.15ರಂದು ಧಾರ್ಮಿಕ ಸಭೆ ನಡೆಯಲಿದ್ದು, ವಿವಿಧ ಜನಾಂಗದ ಶ್ರೀಗಳು ಪಾಲ್ಗೊಳ್ಳುವರು. ಪ್ರಮುಖವಾಗಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ, ವಿಖ್ಯಾತನಂದ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಪ್ರಸನ್ನಾನಂದ ಸ್ವಾಮೀಜಿ, ಶಿವಸುಜ್ಞಾನತೀರ್ಥ ಸ್ವಾಮೀಜಿ, ಪುರುಷೋತ್ತಮಾನಂದಪುರಿ ಸ್ವಾಮೀಜಿ, ಜಯರಾಜೇಂದ್ರ ಸ್ವಾಮೀಜಿ, ಶಂಕರಭಾರತಿ ಸ್ವಾಮೀಜಿ, ಪುರುಷೋತ್ತವಾನಂದನಾಥ ಸ್ವಾಮೀಜಿ, ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರಲಿದ್ದು, ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸುವರು. ವಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪಾಲ್ಗೊಳ್ಳುವರು.
ಅ.16ರಂದು ಬೆಳಿಗ್ಗೆ 11ಕ್ಕೆ ಸವಾರೋಪ ಸಮಾರೋಪ ಸಮಾರಂಭ ನಡೆಯಲಿದ್ದು, ಶ್ರೀ ನಿರಂಜನಾನಂದಾಪುರಿ ಸ್ವಾಮೀಜಿ, ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ವಿಶ್ವಪ್ರಸನ್ನ ತೀರ್ಥ ಪಾದರು, ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ರವಿಶಂಕರ ಗುರೂಜಿ ಉಪಸ್ಥಿತರಿರಲಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸ್ವಾಮೀಜಿ ಕಾರ್ಯುಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊವ್ಮಾಯಿ ಸವಾರೋಪ ಭಾಷಣ ಮಾಡುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಅವರು ವಿವರಿಸಿದರು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಬೇಬಿ ಮಠದ ಡಾ.ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಎಸ್.ಶಿವಕುಮಾರ ಸ್ವಾಮಿ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಹಿಂದಿನ ಕುಂಭಮೇಳದ ಬಾಕಿ ಪಾವತಿ :
ಮಹಾ ಕುಂಭಮೇಳಕ್ಕೆ ರಾಜ್ಯ ಸರ್ಕಾರ 4 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಕುಂಭಮೇಳದ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ, ಸೇತುವೆಗಳ ದುರಸ್ತಿ ಕಾಂರ್ು ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನದಿಯಿಂದ ಆಚೆ ದಡದಲ್ಲಿರುವ ಭೂ ವರಾಹಸ್ವಾಮಿ ದೇವಸ್ಥಾನದ ದರ್ಶನಕ್ಕೆ ಬೋಟ್ ವ್ಯವಸ್ಥೆ ಮಾಡಲಾಗಿದೆ. ಮೂರು ಕಡೆಗಳಲ್ಲಿ ವಾಹನ ನಿಲುಗಡೆಗೆ ಸ್ಥಳ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.
ಕಳೆದ ಬಾರಿ ಕುಂಭಮೇಳಕ್ಕೆ ಅಂದಿನ ಸರ್ಕಾರ 50 ಲಕ್ಷ ರೂ. ನೀಡಿತ್ತು. ಕೆಲವರಿಗೆ ಬಿಲ್ ಪಾವತಿಸಿರಲಿಲ್ಲ. ಈಗ ಎಲ್ಲ ಬಾಕಿ ಬಿಲ್ ನೀಡಲಾಗಿದೆ. ದಾನಿಗಳಿಂದ ಸುಮಾರು ೧ ಸಾವಿರ ಕ್ವಿಂಟಾಲ್ ಅಕ್ಕಿ ಬಂದಿದೆ. ಒಂದು ಬಾರಿಗೆ ಸುಮಾರು 50 ಸಾವಿರ ಮಂದಿಗೆ ದಾಸೋಹ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ಸುವಾರು 700 ಮಂದಿ ಬಾಣಸಿಗರನ್ನು ಕರೆತರಲಾಗುತ್ತಿದೆ. ಬಂದೋಬಸ್ತ್‌ಗೆ 2 ಸಾವಿರ ಪೊಲೀಸರನ್ನು ನಿಯೋಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago